ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ.
01:28 PM Feb 07, 2024 IST
|
prashanth
ಬೆಂಗಳೂರು,ಫೆಬ್ರವರಿ,7,2024(www.justkannada.in): ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ ಎಂದು ಆರೋಪಿಸಿ ನವದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೇ ಇತ್ತ ಇದಕ್ಕೆ ಪ್ರತಿಯಾಗಿ ರಾಜ್ಯದಲ್ಲಿ ಬಿಜೆಪಿ ನಾಯಕರು ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ.
ಈ ಮಧ್ಯೆ ಬೆಳಗಾವಿಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬ್ಯಾರಿಕೇಡ್ ತಳ್ಳಿ ನಗರದ ಕಾಂಗ್ರೆಸ್ ಕಚೇರಿಗೆ ನುಗ್ಗಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದು, ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ತಳ್ಳಾಟ ನಡೆದಿದೆ.
ಇದೇ ಸಮಯದಲ್ಲಿ ಬಿಜೆಪಿ ಕಾರ್ಯಕರ್ತರು ಡಿಕೆ ಸುರೇಶ್ ವಿರುದ್ದ ಘೋಷಣೆ ಕೂಗಿದರೇ ಇತ್ತ ಕಾರ್ಯಕರ್ತರು ಪ್ರಧಾನಿ ಮೋದಿಗೆ ಧಿಕ್ಕಾರ ಕೂಗಿದರು. ಈ ನಡುವೆ 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.
Key words: Congress office-protest-BJP workers-belagaum
Next Article