HomeBreaking NewsLatest NewsPoliticsSportsCrimeCinema

 ಪ್ರಧಾನಿ ಮೋದಿ ಭಯದಿಂದ ಒಂದು ದೇಶ ಒಂದು ಚುನಾವಣೆಗೆ ಕಾಂಗ್ರೆಸ್ ವಿರೋಧ- ಆರ್.ಅಶೋಕ್

06:03 PM Sep 18, 2024 IST | prashanth

ಬೆಂಗಳೂರು, ಸೆಪ್ಟಂಬರ್,18,2024 (www.justkannada.in):  ಪ್ರಧಾನಿ ನರೇಂದ್ರ ಮೋದಿ ಮೇಲಿರುವ ಭಯದಿಂದ ಕಾಂಗ್ರೆಸ್ ನಾಯಕರು ಒಂದು ದೇಶ ಒಂದು ಚುನಾವಣೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.

ಒಂದು ದೇಶ, ಒಂದು ಚುನಾವಣೆ ಕುರಿತ ವರದಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು ಇದಕ್ಕೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಡಿಸಿರುವ ಹಿನ್ನೆಲೆ ಈ ಕುರಿತು ಮಾತನಾಡಿದ ಆರ್.ಅಶೋಕ್, ಒಂದು ದೇಶ, ಒಂದು ಚುನಾವಣೆಯ ಕೇಂದ್ರ ಸರ್ಕಾರದ  ಕ್ರಮಕ್ಕೆ ಸ್ವಾಗತ. ಕಾಂಗ್ರೆಸ್‌ ಮತ್ತು ಕಮ್ಯುನಿಸ್ಟ್‌ ಪಕ್ಷಗಳು ಇಂತಹ ಕ್ರಮಕ್ಕೆ ವಿರೋಧ ಮಾಡುವುದು ಸಹಜ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಒಟ್ಟಿಗೆ ನಡೆದರೆ, ಸಮಸ್ಯೆಯಾಗುತ್ತದೆ ಎಂದು ಅವರು ಹೆದರಿದ್ದಾರೆ. ಜೊತೆಗೆ ಕಾಂಗ್ರೆಸ್ ಗೆ ಪ್ರಧಾನಿ ಮೋದಿ ಅವರ ಭಯವಿದೆ. ಹೀಗಾಗಿ ಒಂದು ದೇಶ ಒಂದು ಚುನಾವಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದರು.

ರಾಹುಲ್‌ ಗಾಂಧಿಗೆ ಪ್ರಬುದ್ಧತೆ ಇಲ್ಲ. ಅವರಿಗೆ ಮಾತನಾಡಲು ಬರಲ್ಲ. ಹೀಗಾಗಿ ಪ್ರಧಾನಿ ಮೋದಿ ಹತ್ತಿರ ಹೋಗುವ ಸರಿಸಮಾನ ನಾಯಕರು ಕಾಂಗ್ರೆಸ್ ನಲ್ಲಿ ಯಾರೂ ಇಲ್ಲ ಎಂದು ಆರ್.ಅಶೋಕ್ ಟೀಕಿಸಿದರು.

ತಾಕತ್ತಿದ್ದರೇ ಕಾಂಗ್ರೆಸ್‌ ಪ್ರಧಾನಿ ಯಾರೆಂದು ಘೋಷಿಸಲಿ ಎಂದು ಸವಾಲೆಸೆದ ಆರ್.ಅಶೋಕ್,  ಇಂತಹ ಸ್ಥಿತಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಬಾರದು. ರಾಹುಲ್‌ ಗಾಂಧಿ ವಿದೇಶಕ್ಕೆ ಹೋಗಿ ಸಂವಿಧಾನ ಹಾಗೂ ಮೀಸಲು ಬಗ್ಗೆ ಮಾತನಾಡಿದ್ದಾರೆ. ಈ ವಿಚಾರಗಳನ್ನು ದೇಶದೊಳಗೆ ಮಾತಾಡಬೇಕು ಎಂದರು.

Key words: Congress, opposes, One Country One Election, R. Ashok

 

Tags :
congressOne Country One ElectionopposesR.ashok
Next Article