HomeBreaking NewsLatest NewsPoliticsSportsCrimeCinema

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರೈತರ ಸಾಲಮನ್ನಾ ಸೇರಿ ಎಲ್ಲಾ ಗ್ಯಾರಂಟಿ ಜಾರಿ- ಮಂಡ್ಯದಲ್ಲಿ ರಾಹುಲ್ ಗಾಂಧಿ ಭರವಸೆ.

03:44 PM Apr 17, 2024 IST | prashanth

ಮಂಡ್ಯ,ಏಪ್ರಿಲ್,17,2024 (www.justkannada.in): ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ರೈತರ ಸಾಲಮನ್ನಾ ಸೇರಿ ಘೋಷಿಸಿರುವ ಎಲ್ಲಾ ಗ್ಯಾರಂಟಿಗಳನ್ನೂ ಜಾರಿಗೊಳಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದರು.

ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ನಡೆದ  ಬೃಹತ್ ಸಮಾವೇಶದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿಯು ಸಂವಿಧಾನವನ್ನ ಮುಗಿಸಲು ಪ್ರಯತ್ನ ಮಾಡುತ್ತಿದೆ. ಈಗ ದೇಶದಲ್ಲಿ ಕೋಟ್ಯಾಧಿಪತಿಗಳ ಸರ್ಕಾರ ನಡೆಯುತ್ತಿದೆ.  ನಾವು ಬಡವರ ಪರ ಸರ್ಕಾರ ನಡೆಸುತ್ತೇವೆ. ನಾವು ಕೊಟ್ಟ ಗ್ಯಾರಂಟಿ ಭರವಸೆ ಈಡೇರಿಸುತ್ತೇವೆ ಎಂದರು.

ಜನರ ಸಮಸ್ಯೆ ಆಲಿಸಲು ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದವು. ಈ ವೇಳೆ  ರೈತರ ಸಂಕಷ್ಟ ಅರಿತಿದ್ದೇನೆ. ರೈತರು ನನ್ನ ಬಳಿ 3 ಮನವಿ ಮಾಡಿದ್ದಾ. ರೆ ಬೆಂಬಲ ಬೆಲೆ ಬಗ್ಗೆ ರೈತರು ಚರ್ಚಿಸಿದ್ದಾರೆ ನಾವು ರೈತರ ಎಲ್ಲಾ ಭರವಸೆ ಈಡೇರಿಸುತ್ತೇವೆ.  30 ದಿನಗಳಲ್ಲಿ ಬೆಳೆ ವಿಮೆ ಪಾವತಿಗೆ ಕ್ರಮ ಕೈಗೊಳ್ಳುಯತ್ತೇವೆ. ಬಿಜೆಪಿ ಆಡಳಿತ ಇರುವ ಕಡೆ ರೈತರು ಸಂಕಷ್ಟದಲ್ಲಿ ಇದ್ದಾರೆ. ರೈತರ ಸಾಲಮನ್ನಾ ಮಾಡುವ ಕೆಲಸ ಆಗುತಿಲ್ಲ ಶ್ರಮಕ್ಕೆ ತಕ್ಕಂತೆ ಬೆಳೆಗಳಿಗೆ ಬೆಲೆ ಸಿಗುತ್ತಿಲ್ಲ ಎಂದರು.

ಕೇಂದ್ರ ಸರ್ಕಾರ ಉದ್ಯಮಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ. ಆದರೆ ರೈತರ ಸಾಲಮನ್ನಾ ಮಾಡಿಲ್ಲ. 20 ರಿಂದ 25 ಉದ್ಯಮಿಗಳ ಏಳಿಗೆಗಾಗಿ ಕೆಲಸ ಮಾಡುತ್ತಿದೆ. ನಾವು ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ಮಾಡುತ್ತೇವೆ.  ಕನಿಷ್ಠ ಬೆಂಬಲ ಬೆಲೆ ನೀಡುತ್ತೇವೆ ಎಂದು ರಾಹುಲ್ ಗಾಂಧಿ ತಿಳಿಸಿದರು.

ಮಹಿಳೆಯರಿಗೆ  ಪ್ರತಿವರ್ಷ 1 ಲಕ್ಷ ರೂ.  ಕೊಡುತ್ತೇವೆ. ಅಂಗನವಾಡಿ ಕಾರ್ಯಕರ್ತೆಯರು ಸಹಾಯಕರಿಗೆ ವೇತನ ಹೆಚ್ಚಳ ಮಾಡುತ್ತೇವೆ. ಉದ್ಯೋಗ ಭಧ್ರತಾ ಯೋಜನೆ ಜಾರಿ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಚಲುವರಾಯಸ್ವಾಮಿ, ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ಪಿ.ಎಂ.ನರೇಂದ್ರಸ್ವಾಮಿ, ಉದಯ, ಗಣಿಗ ರವಿ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮತ್ತಿತರರು ಉಪಸ್ಥಿತರಿದ್ದರು.

Key words: Congress, power, Rahul Gandhi

Tags :
Congress - power -guarantees – implemented-Rahul Gandhi.
Next Article