ರಾಜ್ಯದಲ್ಲಿ 2028ಕ್ಕೆ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ- ಡಿಸಿಎಂ ಡಿಕೆ ಶಿವಕುಮಾರ್ ವಿಶ್ವಾಸ.
10:01 AM Nov 21, 2023 IST
|
prashanth
ಅಧಿಕಾರ ಹಂಚಿಕೆ ನನಗೆ, ಸಿಎಂ, ವರಿಷ್ಠರಿಗೆ ಸಂಬಂಧಪಟ್ಟ ವಿಚಾರ. ಈ ಹಿಂದೆ ಬಿಜೆಪಿಯವರು ನಮ್ಮ ಗ್ಯಾರಂಟಿ ಬಗ್ಗೆ ಟೀಕೆ ಮಾಡುತ್ತಿದ್ದರು. ಆದರೆ ಈಗ ಅವರೇ ನಮ್ಮ ಗ್ಯಾರಂಟಿ ಯೋಜನೆ ಕಾಪಿ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.
ಬೆಂಗಳೂರು,ನವೆಂಬರ್,21,2023(www.justkannada.in): ರಾಜ್ಯದಲ್ಲಿ 2028ರಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.
ಸಂದರ್ಶನವೊಂದರಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಲೋಕಸಭೆ ಚುನಾವಣೆ ಸಂಬಂಧ ಚರ್ಚೆ ಮಾಡುತ್ತೇವೆ. ಕೆಲ ಸಚಿವರಿಗೆ ಲೋಕಸಭೆಯಲ್ಲಿ ಸ್ಪರ್ಧಿಸಬೇಕೆಂಬ ಆಸೆ ಇದೆ. ನನಗೂ ಕೂಡ ಪಾರ್ಲಿಮೆಂಟ್ ಗೆ ಹೋಗಬೇಕು ಎಂಬ ಆಸೆ ಇದೆ ಎಂದರು.
ರಾಜ್ಯದಲ್ಲಿ ಡಿ.ಕೆ ಶಿವಕುಮಾರ್ ಸಿಎಂ ಆಗುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ರಾಜ್ಯದ ಜನರು ನಮ್ಮನ್ನ ನಂಬಿ ಅಧಿಕಾರ ಕೊಟ್ಟಿದ್ದಾರೆ ಮೊದಲು ಜನರ ನಂಬಿಕೆ ಉಳಿಸಕೊಂಡು ಕೆಲಸ ಮಾಡೋಣ ಎಂದರು.
ಅಧಿಕಾರ ಹಂಚಿಕೆ ನನಗೆ, ಸಿಎಂ, ವರಿಷ್ಠರಿಗೆ ಸಂಬಂಧಪಟ್ಟ ವಿಚಾರ. ಈ ಹಿಂದೆ ಬಿಜೆಪಿಯವರು ನಮ್ಮ ಗ್ಯಾರಂಟಿ ಬಗ್ಗೆ ಟೀಕೆ ಮಾಡುತ್ತಿದ್ದರು. ಆದರೆ ಈಗ ಅವರೇ ನಮ್ಮ ಗ್ಯಾರಂಟಿ ಯೋಜನೆ ಕಾಪಿ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.
Key words: Congress- will come - power - again – 2028- DCM -DK Shivakumar
Next Article