For the best experience, open
https://m.justkannada.in
on your mobile browser.

ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ: ಸಿ.ಎಂ ಸಿದ್ದರಾಮಯ್ಯ ಭರವಸೆ.

06:26 PM May 02, 2024 IST | prashanth
ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ  ಸಿ ಎಂ ಸಿದ್ದರಾಮಯ್ಯ ಭರವಸೆ

ಶಿವಮೊಗ್ಗ ಮೇ, 2,2024 (www.justkannada.in):  ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.

ಇಂದು ಶಿವಮೊಗ್ಗ ನಗರದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ಗೆಲುವನ್ನು ಖಚಿತಪಡಿಸಿ ಮಾತನಾಡಿದರು.

ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದ್ದರೂ ರಾಜ್ಯದ ಪರವಾಗಿ, ಜಿಲ್ಲೆಯ ಪರವಾಗಿ ಪಾರ್ಲಿಮೆಂಟಿನಲ್ಲಿ ನೆಪಕ್ಕೂ ಬಾಯಿ ಬಿಡದ ಬಿ.ವೈ.ರಾಘವೇಂದ್ರ ಸಂಸದರಾಗಿದ್ದೇ ವೇಸ್ಟ್ . ಬಿಜೆಪಿಯಿಂದ ಗೆದ್ದ 25 ಮಂದಿ ಸಂಸದರು ರಾಜ್ಯದ ಪರವಾಗಿ ಯಾವತ್ತೂ ಧ್ವನಿ ಎತ್ತಲಿಲ್ಲ. ಇಂಥವರನ್ನು ಗೆಲ್ಲಿಸಿ ನಿಮಗಾಗಲೀ, ರಾಜ್ಯಕ್ಕಾಗಲೀ, ಜಿಲ್ಲೆಗಾಗಲಿ ಏನೇನೂ ಪ್ರಯೋಜನವಿಲ್ಲ ಎಂದರು.

ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ. ಬರಗಾಲ ಬಂದಾಗ, ಪ್ರವಾಹ ಬಂದಾಗಲೂ ರಾಜ್ಯ ನೆನಪಾಗಲಿಲ್ಲ. ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಲೇ ಇರುವ ಮೋದಿ ದ್ವೇಷದ ರಾಜಕಾರಣ ಮಾಡಿ, ಮಲತಾಯಿ ಧೋರಣೆಯನ್ನು ತೋರಿ ದೊಡ್ಡ ಅನ್ಯಾಯ ಮಾಡುತ್ತಿದೆ. ಪ್ರವಾಹ ಅಥವಾ ಬರಗಾಲ ಬಂದಾಗ ರಾಜ್ಯಕ್ಕೆ ಬಂದು ಜನರ ಕಷ್ಟ ಸುಖ ಕೇಳುವ ಪ್ರಯತ್ನವನ್ನೂ ಮೋದಿ ಮಾಡಲೇ ಇಲ್ಲ ಎಂದರು.

ಬಿಜೆಪಿ, ಬಡವರು, ರೈತರ , ಮಹಿಳೆಯರ ವಿರುದ್ಧವಾಗಿರುವ ಸರ್ಕಾರ

10 ವರ್ಷಗಳಲ್ಲಿ ಮೋದಿ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. 15 ಲಕ್ಷ ಕಪ್ಪು ಹಣ ತರಲಿಲ್ಲ, 2 ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ, ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಲಿಲ್ಲ. ಅಚ್ಚೇ ದಿನ್ ಬರಲಿಲ್ಲ. ದೇಶ ಹಾಗೂ ರಾಜ್ಯದ ಜನ ಬೆಲೆಯೇರಿಕೆ, ಹಣದುಬ್ಬರ ಜಾಸ್ತಿಯಾದ್ದರಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ಸಾಲ ಮನ್ನಾ ಮಾಡಿ, ನ್ಯಾಯಯುತ ಬೆಲೆ ಕೊಡಿ, ಎಂ.ಎಸ್.ಪಿ ಗೆ ಕಾನೂನು ರೂಪಿಸಿ ಎಂದು ಹೋರಾಟ ಮಾಡಿದರೂ ನರೇಂದ್ರ ಮೋದಿ ಜಗ್ಗಲಿಲ್ಲ. ಬಿಜೆಪಿ, ಬಡವರು, ರೈತರ , ಮಹಿಳೆಯರ ವಿರುದ್ಧವಾಗಿರುವ ಸರ್ಕಾರ. ಆದ್ದರಿಂದಲೇ ಅವರ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿಲ್ಲ ಎಂದರು.

ಬಡವರಿಗೆ ಶಕ್ತಿ ತುಂಬಲಾಗಿದೆ.

ಶಕ್ತಿ, ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಎಂಟು ತಿಂಗಳೊಳಗೆ ಜಾರಿಗೆ ತಂದಿದ್ದೇವೆ.  ಶಕ್ತಿ ಯೋಜನೆಯಡಿ ಪ್ರಯಾಣಿಸಿದ್ದ ಅರಸೀಕೆರೆಯ ಹೆಣ್ಣುಮಗಳೊಬ್ಬಳು ಟಿಕೆಟ್‍ ಗಳ ಹಾರ ಹಾಕಿದ್ದನ್ನು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.

ಅಂತೆಯೇ ಕೊಪ್ಪಳದ ಮಹಿಳೆಯೊಬ್ಬಳು ಗೃಹಲಕ್ಷ್ಮೀ ಯೋಜನೆಯ ಹಣ ಹಾಗೂ ಗೃಹಜ್ಯೋತಿ ಯೋಜನೆಯಿಂದ ಉಳಿತಾಯವಾದ ಮೊತ್ತದಲ್ಲಿ ಚಿನ್ನದುಂಗುರವನ್ನು ಖರೀದಿಸಿರುವುದನ್ನೂ ಸಿಎಂ ಸಿದ್ದರಾಮಯ್ಯ ಉಲ್ಲೇಖಿಸಿದರು.

ಬಡವರಿಗೆ ಶಕ್ತಿ ತುಂಬುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ. ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಪ್ರಣಾಳಿಕೆಯಲ್ಲಿ ಘೋಷಿಸಿರುವ ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು. ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ಕಾಂಗ್ರೆಸ್ ಹಾಗೂ ಸರ್ಕಾರಕ್ಕೆ ಶಕ್ತಿ ತುಂಬಬೇಕು ಎಂದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಸಂಸದರು ರಾಜ್ಯದ ಸಮಸ್ಯೆ ಬಗ್ಗೆ ಧ್ವನಿ ಎತ್ತಲಿಲ್ಲ

ಲೋಕಸಭೆಯಲ್ಲಿ ಕರ್ನಾಟಕದ ಧ್ವನಿಯಾಗಿ ಕೆಲಸ ಮಾಡುವಂಥವರನ್ನು ಮತದಾರರು ಆಯ್ಕೆ ಮಾಡಬೇಕು. ರಾಜ್ಯದಿಂದ 25 ಸಂಸದರು ಬಿಜೆಪಿಯಿಂದ ಆಯ್ಕೆಯಾದರು, ಆದರೆ ಯಾರೂ ಸಹ ಕೇಂದ್ರದಿಂದ ಕನ್ನಡಿಗರಿಗೆ ಆದ ಅನ್ಯಾಯದ ಬಗ್ಗೆ ಮಾತನಾಡಲಿಲ್ಲ. ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದರೂ, ಒಂದು ಪೈಸೆಯನ್ನೂ ಬಿಡುಗಡೆ ಮಾಡಲಿಲ್ಲ ಎಂದರು.

ಎನ್ ಡಿ ಆರ್ ಎಫ್ ಪರಿಹಾರ ರಾಜ್ಯಕ್ಕೆ ನೀಡುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು

ರಾಜ್ಯಕ್ಕೆ ಭೀಕರ ಬರಗಾಲದ ಪರಿಸ್ಥಿತಿ ಎದುರಾದರೂ ಸಹ ಕೇಂದ್ರ ಬರಪರಿಹಾರವನ್ನು ಬಿಡುಗಡೆ ಮಾಡಲಿಲ್ಲ. ಕರ್ನಾಟಕದಲ್ಲಿ 48 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿ, 35 ಸಾವಿರ ಕೋಟಿ ನಷ್ಟವಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ನಮ್ಮ ಸಂಪನ್ಮೂಲಗಳಿಂದ ತಲಾ ಎರಡು ಸಾವಿರದಂತೆ 34 ಲಕ್ಷ ರೈತರಿಗೆ ಪರಿಹಾರ ನೀಡಲಾಯಿತು.

ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ರಾಜ್ಯಕ್ಕೆ 18,172 ಕೋಟಿ ರೂ.ಗಳ ಬರ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಎನ್ ಡಿ ಆರ್ ಎಫ್ ಪರಿಹಾರ ರಾಜ್ಯಕ್ಕೆ ನೀಡುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು.

ರಾಜ್ಯಕ್ಕಾದ ಅನ್ಯಾಯವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರ ಕೇವಲ 3,454 ಕೋಟಿ ರೂ.ಗಳನ್ನು ನೀಡಿ ಮತ್ತೆ ಮತ್ತೆ ದ್ರೋಹ ಮಾಡುತ್ತಲೇ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.‌

AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, AICC ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ  ಡಿ.ಕೆ.ಶಿವಕುಮಾರ್, AICC ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವ ಮಧು ಬಂಗಾರಪ್ಪ, ಶಾಸಕರಾದ ಗೋಪಾಲಕೃಷ್ಣ ಬೇಳೂರು, ಬಿ.ಕೆ.ಸಂಗಮೇಶ್, ವಿಧಾನ ಪರಿಷತ್ ಸದಸ್ಯರೂ ಪಕ್ಷದ ಕಾರ್ಯಾಧ್ಯಕ್ಣರೂ ಆದ ಮಂಜುನಾಥ್ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್ ಸೇರಿ ಜಿಲ್ಲಾ ಮುಖಂಡರುಗಳು ಉಪಸ್ಥಿತರಿದ್ದರು.

ENGLISH SUMMARY...

Modi remembers Karnataka only during election: CM Siddaramaiah

MP B.Y. Raghavendra who did not raise his voice despite the unfair treatment to the state and did not speak up for the district is a waste: CM

Congress is sure to win Shivamogga Lok Sabha constituency this time
Shivamogga May 2 : Chief Minister Siddaramaiah expressed hope that the Congress will win the Shivamogga Lok Sabha constituency.
He was speaking at the Prajadhwani-2 Lok Sabha election campaign organized in Shivamogga city today on behalf of party candidate Geeta Shivaraj Kumar
Sitting MP B. Y. Raghavendra is a waste as a parliamentarian who does not made the effort to speak in the parliament on behalf of the state and the district even though there is constant injustice meted out to the state. 25 MPs won by BJP never raised their voice for the state. He said that there is no benefit to you, the state or the district by making such people win, he said.
Modi will remember Karnataka during elections. The state was not remembered when there was drought and flood. Modi who is always treating the State unfairly is doing a great injustice by indulging in hate politics and showing step-motherly attitude. He said that Modi never made an effort to come to the state and listen to the hardships and well-being of the people when there was a flood or drought, the CM said.

BJP, government against poor, farmers, women
Modi has not fulfilled his promises in 10 years. did not bring the black money and credit 15 lakhs to everyone’s account, did not create 2 crore jobs, did not reduce the price of essential commodities. Acche Din did not come. The people of the country and the state are in trouble due to high inflation. Even though the farmers fought to waive off loans, pay fair prices and make laws for MSP, Narendra Modi did not budge. BJP is a government against the poor, farmers and women. That is why they have not come forward to solve their problems, he said.

Empowering the poor
We have implemented Shakti, Grilahakshmi, Grihajyoti, Annabhagya and Yuvanidhi schemes within eight months of coming to power. The Chief Minister recalled that a girl from Arasikere, who had travelled under the Shakti Scheme, made a garland from the tickets. Similarly, the Chief Minister also mentioned that a woman from Koppal bought a gold ring with the amount saved from Griha Lakshmi and Griha Jyoti scheme. He said that our government has done the work of empowering the poor.
If the Congress party comes to power at the centre, the guarantees announced in the manifesto will be implemented. He said that Congress and the government will be strengthened if the people vote for the Congress candidate.
He expressed his confidence that our candidate will win in Shivamogga Lok Sabha constituency.

BJP MPs did not raise their voice about the problem of the state
Voters should elect those who work as the voice of Karnataka in the Lok Sabha. 25 MPs from the state were elected by the BJP, but no one spoke about the injustice done to the Kannadigas by the Centre. The state was treated unfairly in tax distribution. He said that although 5300 crore was announced in the Union Budget for the Upper Bhadra Project, not even a single paisa was released.

NDRF relief is not alms to the state, it is our right
Even though the state was facing a severe drought situation, the Centre did not release drought relief. In Karnataka, 48 lakh hectares of crops were destroyed and the farmers suffered a loss of 35 thousand crores. 34 lakh farmers were compensated with 2000 each from our resources.
As per NDRF guidelines, a request for drought relief of Rs 18172 crore was submitted. NDRF compensation is not alms to the state, it is our right.
He expressed indignation that in response to the struggle in the Supreme Court challenging the injustice to the state, the central government has given only Rs 3454 crores and continues to betray it again and again.
AICC President Mallikarjuna Kharge, AICC Former President Rahul Gandhi, KPCC President DK Shivakumar, AICC General Secretary Randeep Singh Surjewala, Minister Madhu Bangarappa, MLAs Gopalakrishna Belur, BK Sangamesh, Legislative Council Member and Party Working President Manjunath Bhandari, District Congress President Prasannakumar along with district leaders were present.

Key words: Congress, win, Shimoga, CM Siddaramaiah

Tags :

.