For the best experience, open
https://m.justkannada.in
on your mobile browser.

 ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆಗೆ ಶರಣು.

01:29 PM May 31, 2024 IST | prashanth
 ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆಗೆ ಶರಣು

ದಾವಣಗೆರೆ,ಮೇ,31,2024 (www.justkannada.in):  ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ(KRIDL) ನಿಂದ ಕಾಮಗಾರಿಯ ಬಾಕಿ ಬಿಲ್ ಪಾವತಿಯಾಗದ ಹಿನ್ನೆಲೆ ಮನನೊಂದು ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲ್ಲೂಕಿನ ಸಂತೆಬೆನ್ನೂರಿನಲ್ಲಿ ನಡೆದಿದೆ.

ಪಿ.ಎಸ್ ಗೌಡರ್ (48) ಡೆತ್​ನೋಟ್​ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ.  ಪಿ.ಎಸ್ ಗೌಡರ್ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ವಾಸಿಸುತ್ತಿದ್ದರು. ಸಂತೇಬೆನ್ನೂರಿನ ಕೃಷಿ ಇಲಾಖೆ ಆವರಣದಲ್ಲಿ 2023-24ರಲ್ಲಿ ನಡೆದ ಕಾಮಗಾರಿಗೆ ಸಂಬಂಧಿಸಿದ ಹಣ ಬಿಡುಗಡೆ ಮಾಡದೆ ಕೆಆರ್​ಡಿಎಲ್ ಅಧಿಕಾರಿಗಳು ಸತಾಯಿಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.

ಹಾಗೆಯೇ ಹಣಕಾಸಿನ ವಿಚಾರದಲ್ಲಿ ಇವರ ಇಬ್ಬರು ಸಹೋದರರು  ಮೋಸಮಾಡಿದ್ದಾರೆ ಎಂದು ಡೆತ್ ನೋಟ್ ನಲ್ಲಿ ಪಿಎಸ್ ಗೌಡರ್  ಆರೋಪಿಸಿದ್ದಾರೆ. ಅಧಿಕಾರಿಗಳ ಧೋರಣೆ ಮತ್ತು ಸಹೋದರರ ವರ್ತನೆಯಿಂದ ಬೇಸತ್ತು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಪಿಎಸ್ ಗೌಡರ್ ಪತ್ನಿ ವಸಂತಕುಮಾರ್ ದೂರು ನೀಡಿದ್ದು, ಈ ಕುರಿತು ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words:  contractor, committed, suicide

Tags :

.