HomeBreaking NewsLatest NewsPoliticsSportsCrimeCinema

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಇಲಾಖಾ ತನಿಖೆಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ.

04:38 PM May 31, 2024 IST | prashanth

ಬೆಂಗಳೂರು,ಮೇ,31,2024 (www.justkannada.in): KRIDL ನಿಂದ ಕಾಮಗಾರಿಯ ಬಾಕಿ ಬಿಲ್ ಪಾವತಿಯಾಗಿಲ್ಲ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ದಾವಣಗೆರೆ ಸಂತೇಬೆನ್ನೂರಿನ ಗುತ್ತಿಗೆದಾರ ಪಿಎಸ್ ಗೌಡರ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ  ಇಲಾಖಾ ತನಿಖೆ ನಡೆಸಲು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಕೆಆರ್ ಐಡಿಎಲ್ ಕುರಿತ ಈ ಆರೋಪಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಲು ಹಿರಿಯ ಅಧಿಕಾರಿಗಳ ಸಮಿತಿ ರಚಿಸುವಂತೆ ಎಸಿಎಸ್ ಆರ್ ಡಿಪಿಆರ್ ಗೆ ಸೂಚಿಸಿದ್ದೇನೆ ಎಂದಿದ್ದಾರೆ.

ಹಾಗೆಯೇ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್ ಗೌಡರ್ ಆತ್ಮಹತ್ಯೆ ಪ್ರಕರಣದ ಸಂಬಂಧ ಕೆಆರ್ ಐಡಿಎಲ್ ಎಂಜಿನಿಯರಿಂಗ್ ನಿಗಮವಾಗಿದ್ದು, ಉಪ ಗುತ್ತಿಗೆಯನ್ನು ಪ್ರೋತ್ಸಾಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

Key words: Contractor, suicide, case, Minister, Priyank Kharge

Tags :
Contractor- suicide –case- MinisterinvestigationPriyank Kharge
Next Article