ಹನುಮ ಧ್ವಜ ತೆರವು ವಿವಾದ: ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ.
01:57 PM Jan 29, 2024 IST
|
prashanth
ಮೈಸೂರು,ಜನವರಿ,29,2024(www.justkannada.in): ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು.
ಮೈಸೂರು ನಗರ ಮತ್ತು ಗ್ರಾಮಾಂತರ ಬಿಜೆಪಿ ವತಿಯಿಂದ ಮೈಸೂರಿನ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಶಾಸಕ ಟಿ ಎಸ್ ಶ್ರೀವತ್ಸ, ಮಾಜಿ ಶಾಸಕ ನಗರಾಧ್ಯಕ್ಷ ಎಲ್ ನಾಗೇಂದ್ರ, ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಎಲ್ .ಆರ್ ಮಹದೇವಸ್ವಾಮಿ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ರಘು ಕೌಟಿಲ್ಯ, ಮಾಜಿ ಸಚಿವ ಸಿ.ಎಚ್ ವಿಜಯಶಂಕರ್, ಅಲ್ಪ ಸಂಖ್ಯಾತ ಮೋರ್ಚಾ ಅಧ್ಯಕ್ಷ ಅನಿಲ್ ಥಾಮಸ್, ಮಾಜಿ ಮೇಯರ್ ಶಿವಕುಮಾರ್, ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.
Key words: Controversy -removal - Hanuman flag- BJP -protests - Mysore.
Next Article