HomeBreaking NewsLatest NewsPoliticsSportsCrimeCinema

ಬಿಜೆಪಿ ಅವಧಿಯಲ್ಲಿ ಭ್ರಷ್ಟಾಚಾರ: ಸಾಲದ ಗ್ಯಾರಂಟಿ ಕೊಟ್ಟಿದ್ದರು- ಸಚಿವ ರಾಮಲಿಂಗರೆಡ್ಡಿ.

12:28 PM Feb 09, 2024 IST | prashanth

ಕಲ್ಬುರ್ಗಿ, ಫೆಬ್ರವರಿ 9,2024(www.justkannada.in):  ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಇದ್ದಾಗ ಅತಿಹೆಚ್ಚು ಭ್ರಷ್ಟಾಚಾರ ನಡೆದಿತ್ತು. 3 ವರ್ಷಗಳಲ್ಲಿ 3 ಲಕ್ಷ ಕೋಟಿ ಸಾಲ ಮಾಡಿದ್ದರು ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಟೀಕಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ನಮ್ಮ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರ ಆಗಿಲ್ಲ ಬಿಜೆಯವರಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇದ್ದ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರವಾಗಿತ್ತು. ನನ್ನ ಜೀವನದಲ್ಲೇ ಅಂತಹ ಸರ್ಕಾರ ನೋಡಿರಲಿಲ್ಲ ಎಂದು ತಿಳಿಸಿದರು.

ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಇದ್ದಾಗ ಅತಿಹೆಚ್ಚು ಭ್ರಷ್ಟಾಚಾರ ನಡೆದಿತ್ತು. 3 ವರ್ಷಗಳಲ್ಲಿ 3 ಲಕ್ಷ ಕೋಟಿ ಸಾಲ ಮಾಡಿದ್ದರು. ಬಿಜೆಪಿಯವರು ಸಾಲದ ಗ್ಯಾರಂಟಿಯನ್ನು ಕೊಟ್ಟಿದ್ದರು ಎಂದು ರಾಮಲಿಂಗಾರೆಡ್ಡಿ  ಟಾಂಗ್ ನೀಡಿದರು.

Key words: Corruption - BJP –period-  loan -guarantee – Minister- Ramalingareddy

Tags :
Corruption - BJP –period-  loan -guarantee – Minister- Ramalingareddy
Next Article