ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಸಮನ್ಸ್
ಬೆಂಗಳೂರು, ಆಗಸ್ಟ್, 8,2024 (www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ದ ಇಡಿ ವಿಚಾರಣೆ ಖಂಡಿಸಿ ಪ್ರತಿಭಟನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಆಗಸ್ಟ್ 29 ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಕೋರ್ಟ್ ಸಮನ್ಸ್ ನೀಡಿದೆ.
ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಗೆ ಸಮನ್ಸ್ ಜಾರಿ ಮಾಡಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಿನಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಿಗೆ ಇಡಿ ಅನಗತ್ಯವಾಗಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ 2022ರಲ್ಲಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಿದ್ದರು. ಕಾನೂನುಬಾಹಿರವಾಗಿ ಪ್ರತಿಭಟನೆ ಮಾಡಿದ್ದಾರೆಂದು ಆರೋಪದ ಮೇಲೆ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿತ್ತು.
ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರಿಗೆ ಆಗಸ್ಟ್ 29ರಂದು ಖುದ್ದು ಹಾಜರಾಗುವಂತೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಸಮನ್ಸ್ ನೀಡಿದೆ.
Key words: court, Summons, CM Siddaramaiah, DCM DK Shivakumar