HomeBreaking NewsLatest NewsPoliticsSportsCrimeCinema

ರಾಜ್ಯದಲ್ಲಿ ಕೋವಿಡ್ ಭೀತಿ: 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ –ಸಚಿವ ದಿನೇಶ್ ಗುಂಡೂರಾವ್.

02:58 PM Dec 18, 2023 IST | prashanth

ಕೊಡಗು, ಡಿಸೆಂಬರ್ 18(www.justkannada.in): ಪಕ್ಕದ ರಾಜ್ಯ ಕೇರಳದಲ್ಲಿ ಕೊರೊನಾ ವೈರಸ್ ರೂಪಾಂತರಿ ಜೆಎನ್​.1(JN.1) ಪ್ರಕರಣಗಳು ಹೆಚ್ಚಾಗಿದ್ದು ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸಲಾಗುತ್ತಿದೆ. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ  ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಕುಶಾಲನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್,  ರಾಜ್ಯದಲ್ಲಿ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಸಭೆ ಮಾಡಿ ಚರ್ಚೆ ಮಾಡಿದ್ದೇವೆ. ಕೇಂದ್ರ ಸರ್ಕಾರ ಹಾಗೂ ತಜ್ಞರ ಜೊತೆ ಕೂಡ ಚರ್ಚೆ ಮಾಡಲಾಗಿದೆ. ಹೆಚ್ಚು ಸೋಂಕು ಪತ್ತೆ ಪರೀಕ್ಷೆ ಮಾಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ. ಅಗತ್ಯವಿರುವ ಬೆಡ್, ಪಿಪಿಇ ಕಿಟ್, ಆಕ್ಸಿಜನ್​​ ಸಿದ್ಧವಾಗಿಡಲಾಗಿದೆ. ಕೇರಳ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದರು.

ಯಾವುದೇ ನಿರ್ಬಂಧ ಹೇರುವ ಯೋಚನೆ ಸದ್ಯಕ್ಕಿಲ್ಲ. ಕೊರೊನಾ ರೂಪಾಂತರಿ ಬಗ್ಗೆ ಯಾರೂ ಸಹ ಆತಂಕಪಡಬೇಕಿಲ್ಲ. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಹೃದಯ ಸಂಬಂಧಿ ಸಮಸ್ಯೆ ಇದ್ರೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೋವಿಡ್ ಲಕ್ಷಣ ಇರುವವರೂ ಸಹ ಮಾಸ್ಕ್ ಧರಿಸಿ ಎಂದರು.

ಶೀತ, ಜ್ವರ ಕೆಮ್ಮು ಇರುವವರು ಕೊರೊನಾ ಟೆಸ್ಟ್​​ ಮಾಡಿಸಿಕೊಳ್ಳಬೇಕು. ಹೆಚ್ಚು ಪಾಸಿಟಿವ್ ಬಂದರಷ್ಟೇ ನಿಷೇಧ, ನಿರ್ಬಂಧ ಇತ್ಯಾದಿ ಕ್ರಮಗಳ ಬಗ್ಗೆ ಯೋಚನೆ ಮಾಡುತ್ತೇವೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

Key words: Covid - Mask -mandatory – above- 60 years - Minister -Dinesh Gundurao.

Tags :
Covid - Mask -mandatory – above- 60 yearsDinesh Gunduraominister
Next Article