ಶೀಘ್ರದಲ್ಲಿ ಕೋವಿಡ್ ಟೆಸ್ಟಿಂಗ್ ಹೆಚ್ಚಳ: ಇಂದು ಮಾರ್ಗಸೂಚಿ ಬಿಡುಗಡೆ- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್.
ಬೆಂಗಳೂರು,ಡಿಸೆಂಬರ್19,2023(www.justkannada.in): ದೇಶದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ, ರಾಜ್ಯದಲ್ಲೂ ಭೀತಿ ಆವರಿಸಿದ್ದು ಶೀಘ್ರದಲ್ಲಿ ಕೋವಿಡ್ ಟೆಸ್ಟಿಂಗ್ ಹೆಚ್ಚಳ ಮಾಡಲಾಗುತ್ತದೆ. ಇಂದು ಮಾರ್ಗಸೂಚಿ ಬಿಡುಗಡೆ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕೇರಳದಲ್ಲಿ ಕೊಲರೋನ JN-1 ರೂಪಂತರ ತಳಿ ರಾಜ್ಯದಲ್ಲೂ ಹರಡುವ ಆತಂಕ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆರೋಗ್ಯ ಇಲಾಖೆಯಿಂದ ಕೊಲರೋನ ಸಂಬಂಧ ಸಭೆ ನಡೆಸುತ್ತಿದೆ. ಕೋವಿಡ್ ಹರಡುವಿಕೆ ತಡೆಗೆ ಬೆಂಗಳೂರು ಸೇರಿ ಎಲ್ಲಾಕಡೆಗಳಲ್ಲಿ ಟೆಸ್ಟಿಂಗ್ ಹೆಚ್ಚಳ ಮಾಡಲು ಸೂಚನೆ ನೀಡಲಾಗುತ್ತದೆ. 60 ವರ್ಷ ಮೇಲ್ಪಟ್ಟವರು ಮಾಸ್ಕ್ ಧರಿಸಬೇಕು ಆಸ್ಪತ್ರೆಗಳಲ್ಲಿ ಎಲ್ಲಾ ರೀತಿಯ ಸಿದ್ದತೆಗೆ ಸೂಚನೆ ನೀಡಲಾಗಿದೆ ಎಂದರು.
ರಾಜ್ಯದಲ್ಲಿ ಆತಂಕ ಪಡುವ ವಾತಾವರಣ ಇಲ್ಲ. ನಾಳೆ ಕೇಂದ್ರ ಆರೋಗ್ಯ ಸಚಿವರ ಜೊತೆ ಸಭೆ ನಡೆಯಲಿದೆ. ಇಂದು ಎಲ್ಲಾ ಜಿಲ್ಲಾ ಆರೋಗ್ಯಧಿಕಾರಿಗಳ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಜೊತೆ ಸಭೆ ನಡೆಸುತ್ತೇವೆ. ಇಂದು ಕೋವಿಡ್ ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ ಎಂದರು.
Key words: Covid testing – increase- soon-Health Minister -Dinesh Gundurao.