HomeBreaking NewsLatest NewsPoliticsSportsCrimeCinema

ಸರ್ಕಾರದಿಂದ ಮಕ್ಕಳ ಮನಸ್ಸಲ್ಲೂ ಸಂಘರ್ಷ ಮೂಡಿಸುವ ಕೆಲಸ- ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ.

04:55 PM Feb 19, 2024 IST | prashanth

ಬೆಂಗಳೂರು,ಫೆಬ್ರವರಿ,19,2024(www.justkannada.in):  ವಸತಿ ಶಾಲೆಗಳಲ್ಲಿ ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬನ್ನಿ ಎಂಬ ಘೋಷ ವಾಕ್ಯವನ್ನು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನೆ ಮಾಡಿ ಎಂದು ಬದಲಾವಣೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸರ್ಕಾರ ಮಕ್ಕಳ ಮನಸಲ್ಲಿ ಸಂಘರ್ಷ ಮೂಡಿಸುವ ಕೆಲಸ ಮಾಡಿಸುತ್ತಿದೆ. ಸರ್ಕಾರದ ವಸತಿ ಶಾಲೆಗಳಲ್ಲಿ ಅಕ್ಕಿ ಸಿಗುತ್ತಿಲ್ಲ. ಅಭಿವೃದ್ಧಿಗೆ ಹಣ ಕೊಡುವುದಿಲ್ಲ. ಹಸಿವು ಮುಕ್ತ ಕರ್ನಾಟಕ ಅಂತ ಬೋರ್ಡ್ ಹಾಕಿಕೊಂಡಿದ್ದಾರೆ. ಮೊದಲು ನಿಮ್ಮ ಶಾಲಾ ಮಕ್ಕಳಿಗೆ ಅನ್ನ ಕೊಡಿ ವಿದ್ಯೆ ಕೊಡಿ. ಮೊದಲು ವಸತಿಶಾಲೆಗಳಲ್ಲಿ ಹಸಿವು ಮುಕ್ತ ಮಾಡಿ ಎಂದು ಟಾಂಗ್ ನೀಡಿದರು.

ಬಡವರಿಗೆ ಅಕ್ಕಿಯನ್ನು ನರೇಂದ್ರ ಮೋದಿ ಸರ್ಕಾರ ಕೊಡುತ್ತಿದೆ. ಅದನ್ನೂ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಅದೇ ರೀತಿ ವಿದ್ಯಾರ್ಥಿಗಳಿಗೆ ನೀಡುವ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಬಸವರಾಜ ಬೊಮ್ಮಾಯಿ ಆರೋಪಿಸಿದರು.

Key words: creating -conflict - minds of children – government-Former CM-Basavaraj Bommai

Tags :
Basavaraj Bommaicreating -conflict - minds of childrenFormer CMgovernment
Next Article