ಹಾಸನಾಂಬೆ ದರ್ಶನದ ವೇಳೆ ಕರೆಂಟ್ ಶಾಕ್; ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಸಚಿವ ದಿನೇಶ್ ಗುಂಡೂರಾವ್.
03:39 PM Nov 10, 2023 IST
|
veerabhadra
ಹಾಸನ,ನವೆಂಬರ್,10,2023(www.justkannada.in): ಹಾಸನಾಂಬೆ ದರ್ಶನದ ವೇಳೆ ವಿದ್ಯುತ್ ಶಾಕ್ ನಿಂದಾಗಿ ನೂಕು ನುಗ್ಗಲು ಉಂಟಾಗಿ ಕಾಲ್ತುಣಿತದಿಂದ ಗಾಯಗೊಂಡಿದ್ದವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಾಸನ ಜಿಲ್ಲಾಸ್ಪತ್ರೆಯಲ್ಲಿ ಅಸ್ವಸ್ಥರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.
ಈ ವೇಳೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು ‘ಹಾಸನಾಂಬೆ ದರ್ಶನದ ವೇಳೆ ಕರೆಂಟ್ ಶಾಕ್ ಹೊಡೆದಿದ್ದು ಸ್ಪಷ್ಟವಾಗಿದೆ. ಇದೇ ವೇಳೆ ನೂಕಾಟ ತಳ್ಳಾಟದ ವೇಳೆ ಹಲವರಿಗೆ ಗಾಯಗಳಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ, ಸದ್ಯ ಆರೋಗ್ಯವಾಗಿದ್ದು, ಕರೆಂಟ್ ಶಾಕ್ನಿಂದ ಓರ್ವ ಯುವತಿ ಅಸ್ವಸ್ಥಗೊಂಡಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದರು.
Key words: Current shock - Hassanambe –devotees- Minister -Dinesh Gundurao- visited -hospital
Next Article