ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ: ಐವರಿಗೆ ಗಾಯ.
12:33 PM Nov 22, 2023 IST
|
prashanth
ಬೆಂಗಳೂರು,ನವೆಂಬರ್,22,2023(www.justkannada.in): ಅಡುಗೆ ಅನಿಲ ಸೊರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡು ಐವರು ಗಾಯಗೊಂಢಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ನಗರದ ವೀವರ್ಸ್ ಕಾಲೋನಿ ಬಳಿಯ ಮಾರುತಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಮಾರ್ಟಿನ್ ಎಂಬುವವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಉತ್ತರ ಪ್ರದೇಶದ ವಾರಾಣಸಿ ಮೂಲದ ಜಮಾಲ್, ನಾಜಿಯಾ, ಇರ್ಫಾನ್, ಗುಲಾಬ್, ಶಹಜಾದ್ಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮುಂಜಾನೆ 5.30ರ ಸುಮಾರಿಗೆ ಸಿಲಿಂಡರ್ ಸೋರಿಕೆಯಾಗಿ ಸ್ಫೋಟವಾಗಿದೆ. ಸಿಲಿಂಡರ್ ಸ್ಫೋಟಗೊಂಡ ತೀವ್ರತೆಗೆ ಮನೆಯ ಕಿಟಕಿಗಳು ಛಿದ್ರವಾಗಿವೆ. ಮನೆಯ ಮುಂಭಾಗವಿದ್ದ ಕಾರಿನ ಗಾಜು ಕೂಡ ಪುಡಿಪುಡಿಯಾಗಿದೆ.
Key words: Cylinder- blast – Bangalore- Five- injured
Next Article