ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾಗಿ ಚರ್ಚಿಸಿದ ಗೃಹ ಸಚಿವ ಡಾ ಜಿ.ಪರಮೇಶ್ವರ್.
01:09 PM Jan 27, 2024 IST
|
prashanth
ಬೆಂಗಳೂರು,ಜನವರಿ,27,2024(www.justkannada.in): ನಿಗಮ ಮಂಡಗಳಿಗಳ ನೇಮಕ ಪಟ್ಟಿ ನಿನ್ನೆ ಬಿಡುಗಡೆಯಾಗಿದ್ದು 32 ಶಾಸಕರಿಗೆ ಜವಾಬ್ದಾರಿ ನೀಡಲಾಗಿದೆ. ಈ ಬೆನ್ನಲ್ಲೆ ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಇಂದು ಬೆಳಿಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮನೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ನೀಡಿ ಚರ್ಚೆ ನಡೆಸಿರುವುದು ಕುತೂಹಲ ಕೆರಳಿಸಿದೆ. ಗೃಹಮಂಡಳಿ ನೇಮಕಾತಿ ಸಂದರ್ಭದಲ್ಲಿ ತಮ್ಮೊಂದಿಗೆ ಚರ್ಚೆ ನಡೆಸಿಲ್ಲ ಎಂದು ಪರಮೇಶ್ವರ್ ಬಹಿರಂಗ ಹೇಳಿಕೆ ನೀಡಿದ್ದರು.
ನಿಗಮ ಮಂಡಳಿಗಳ ಶಾಸಕರ ಪಟ್ಟಿಯಲ್ಲಿ ಮೂಲ ಕಾಂಗ್ರೆಸಿಗರನ್ನು ಕಡೆಗಣಿಸಲಾಗಿದ್ದು ವಲಸಿಗರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂಬ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ಪರಮೇಶ್ವರ್‍ರವರು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ ಎನ್ನಲಾಗಿದೆ.
Key words: DCM-DK Shivakumar -- discuss - Home Minister- Dr G. Parameshwar.
Next Article