ಪ್ರಧಾನಿ ಮೋದಿ ಭೇಟಿಯಾಗಿ ಚರ್ಚಿಸಿದ ಡಿಸಿಎಂ ಡಿ.ಕೆ ಶಿವಕುಮಾರ್
01:07 PM Jul 31, 2024 IST
|
prashanth
ನವದೆಹಲಿ, ಜುಲೈ, 31,2024 (www.justkannada.in): ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ನವದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಈ ಬಾರಿ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ಸಿಕ್ಕಿಲ್ಲ. ಹೀಗಾಗಿ ಬೆಂಗಳೂರು ಅಭಿವೃದ್ಧಿ ಯೋಜನೆ ಬಗ್ಗೆ ಪ್ರಧಾನಿ ಮೋದಿ ಜತೆ ಚರ್ಚೆ ನಡೆಸಿದ್ದೇನೆ. ಗಿಫ್ಟ್ ಸಿಟಿ' ಬಗ್ಗೆ ಮಾತನಾಡಿದ್ದಾಗ ಅದನ್ನು ನೀಡಲ್ಲ ಎಂದಿದ್ದರು. ಹೀಗಾಗಿ ಬೇರೆ ಅಭಿವೃದ್ಧಿ ಯೋಜನೆಗಳಿಗೆ ನೆರವು ನೀಡುವಂತೆ ಮನವಿ ಮಾಡಲಾಗಿದೆ ಎಂದರು.
ಇನ್ನು ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆಯೂ ಚರ್ಚಿಸಲಾಗಿದೆ. ಬಜೆಟ್ ನಲ್ಲಿ ಘೋಷಿಸಲಾಗಿದ್ದ ಭದ್ರಾ ಮೇಲ್ಡಂಡೆ ಯೋಜನೆಯ ಹಣ ಬಂದಿಲ್ಲ. ಹೀಗಾಗಿ ಈ ಬಗ್ಗೆ ಪ್ರಸ್ತಾಪಿಸಿದ್ದು, ಪರಿಶೀಲಿಸುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ ಎಂದರು.
Key words: DCM, DK Shivakumar, met, PM Modi
Next Article