HomeBreaking NewsLatest NewsPoliticsSportsCrimeCinema

ಡಿಕೆಶಿ ವಿರುದ್ದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ಸುಪ್ರೀಂಕೋರ್ಟ್ ನೋಟಿಸ್: ವಿಚಾರಣೆ ಮುಂದೂಡಿಕೆ

01:23 PM Sep 17, 2024 IST | prashanth

ಬೆಂಗಳೂರು,ಸೆಪ್ಟಂಬರ್,17,2024 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಲ್ಕು ವಾರಗಳ ಕಾಲ ಮುಂದೂಡಿಕೆ ಮಾಡಿದೆ.

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೈಗೆತ್ತುಕೊಂಡ ಸುಪ್ರೀಂಕೋರ್ಟ್ ,  ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. ಡಿಸಿಎಂ ಡಿ.ಕೆ. ಶಿವಕುಮಾರ್, ರಾಜ್ಯ ಸರ್ಕಾರ ಹಾಗೂ ಲೋಕಾಯುಕ್ತಕ್ಕೆ ನೋಟಿಸ್ ಜಾರಿಗೊಳಿಸಿದೆ. .  ತಕರಾರು ಸಲ್ಲಿಸಲು ಸಿಬಿಐ, ಡಿಕೆ ಶಿವಕುಮಾರ್ ಪರ ವಕೀಲರಿಗೆ ಸೂಚನೆ ನೀಡಿ ವಿಚಾರಣೆಯನ್ನ ನಾಲ್ಕು ವಾರಗಳ ಕಾಲ ಮುಂದೂಡಿಕೆ ಮಾಡಿದೆ.

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಗೆ ಸಂಬಂಧಿಸಿದಂತೆ ಸಿಬಿಐ ಹಾಗೂ ಶಾಸಕ ಯತ್ನಾಳ್ ಸಲ್ಲಿಸಿದ್ದ ಅರ್ಜಿ ಕುರಿತು ವಿಚಾರಣೆ ನಡೆಸಿದ್ದ ಹೈಕೋರ್ಟ್ , ರಾಜ್ಯ-ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್​ ತೀರ್ಮಾನಿಸಬೇಕು ಎಂದು ಹೇಳಿ ಅರ್ಜಿ ವಜಾ ಗೊಳಿಸಿತ್ತು.

ಹೈಕೋರ್ಟ್ ಆದೇಶ ಪ್ರಶ್ನಿಸಿ  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

Key words: DCM, DK Shivakumar, Supreme Court,  notice, Adjournment, hearing

Tags :
AdjournmentDCMDK ShivakumarhearingnoticeSupreme Court
Next Article