For the best experience, open
https://m.justkannada.in
on your mobile browser.

ಮಳೆ ಹಾನಿ ಪ್ರದೇಶಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ, ಪರಿಶೀಲನೆ.

04:21 PM May 20, 2024 IST | prashanth
ಮಳೆ ಹಾನಿ ಪ್ರದೇಶಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಭೇಟಿ  ಪರಿಶೀಲನೆ

ಬೆಂಗಳೂರು,ಮೇ,20,2024 (www.justkannada.in): ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಮಳೆಯಿಂದ ಅಪಾರ ಹಾನಿ ಉಂಟಾಗುತ್ತಿದೆ. ಈ ಮಧ್ಯೆ ಬೆಂಗಳೂರಿನಲ್ಲಿ ಮಳೆ ಹಾನಿ ಪ್ರದೇಶಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಯಲಹಂಕ ವ್ಯಾಪ್ತಿಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ರಮಣಶ್ರೀ ಅಪಾರ್ಟ್ ಮೆಂಟ್, ನಾರ್ತವುಡ್ ವಿಲ್ಲಾದಲ್ಲಿ ಮತ್ತು ರಾಜಕಾಲುವೆಯನ್ನೂ ಡಿಕೆ ಶಿವಕುಮಾರ್ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಂದ ಪ್ರವಾಹ ಕುರಿತು ಮಾಹಿತಿ ಪಡೆದರು.  ಭೇಟಿ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಸ್ಥಳೀಯ ನಿವಾಸಿಗಳು ಅಧಿಕಾರಿಗಳ ವಿರುದ್ದ ದೂರು ನೀಡಿದರು.

Key words: DCM, DK Shivakumar, visited, rain

Tags :

.