HomeBreaking NewsLatest NewsPoliticsSportsCrimeCinema

ಶಾಸಕ ಗೋಪಾಲಯ್ಯಗೆ ಕೊಲೆ ಬೆದರಿಕೆ: ಮಾಜಿ ಕಾರ್ಪೊರೇಟರ್ ವಿರುದ್ದ ದೂರು, ಬಂಧನ.

10:55 AM Feb 14, 2024 IST | prashanth

ಬೆಂಗಳೂರು, ಫೆಬ್ರವರಿ, 14,2024(www.justkannada.in): ಮಾಜಿ ಸಚಿವ, ಬಿಜೆಪಿ ಶಾಸಕ ಕೆ ಗೋಪಾಲಯ್ಯಗೆ  ಜೀವ ಬೆದರಿಕೆ  ಹಾಕಿದ ಆರೋಪದ ಮೇಲೆ ಮಾಜಿ ಕಾರ್ಪೊರೇಟರ್ ಪದ್ಮರಾಜು ವಿರುದ್ಧ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳವಾರ ರಾತ್ರಿ 11 ಗಂಟೆಗೆ ಗೋಪಾಲಯ್ಯಗೆ ಕರೆ ಮಾಡಿದ್ದ ಪದ್ಮರಾಜು, ಕೊಲೆ ಬೆದರಿಕೆ ಹಾಕಿದ್ದಾಗಿ ಪೊಲೀಸ್​ ಠಾಣೆಗೆ ಕೆ. ಗೋಪಾಲಯ್ಯ ದೂರು ನೀಡಿದ್ದರು. ಈ ಸಂಬಂಧ ಶಾಸಕ ಕೆ.ಗೋಪಾಲಯ್ಯ ಅವರು, ವಿಧಾನಸಭೆ ಸ್ಪೀಕರ್​ಗೆ ಹಾಗೂ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಅವರಿ​ಗೂ ದೂರು ನೀಡಿದ್ದಾರೆ.

ಪದ್ಮರಾಜು​​ ಬೆದರಿಕೆ ಹಾಕಿದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ ಅವರಿಗೂ ದೂರು ನೀಡುತ್ತೇನೆ. ಪದ್ಮರಾಜುನನ್ನ ಗಡಿಪಾರು ಮಾಡುವಂತೆ ಆಗ್ರಹಿಸುತ್ತೇನೆ ಎಂದು ಗೋಪಾಲಯ್ಯ ಹೇಳಿದ್ದಾರೆ.

ಪದ್ಮರಾಜ್ ಪೊಲೀಸ್ ವಶಕ್ಕೆ

ಶಾಸಕ ಕೆ ಗೋಪಾಲಯ್ಯಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟರ್​​​​​​​​​​​​​​ ಪದ್ಮರಾಜ್​ ನನ್ನು ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ವಶಕ್ಕೆ  ಪಡೆದಿದ್ದಾರೆ. ಪದ್ಮರಾಜ್ ಬಳಿಯಿದ್ದ ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Key words: Death threat - MLA –Gopalaiah- Complaint-police

Tags :
Death threat - MLA –Gopalaiah- Complaint-police
Next Article