For the best experience, open
https://m.justkannada.in
on your mobile browser.

ರಾಹುಲ್ ಗಾಂಧಿ ಅವರಿಗೆ ಕೊಲೆ ಬೆದರಿಕೆ: ತೇಜೋವಧೆಗೆ ಸುಳ್ಳಿನ ಸರಮಾಲೆ ಸೃಷ್ಟಿ- ಸಿಎಂ ಸಿದ್ದರಾಮಯ್ಯ ತೀವ್ರ ಖಂಡನೆ

03:57 PM Sep 18, 2024 IST | prashanth
ರಾಹುಲ್ ಗಾಂಧಿ ಅವರಿಗೆ ಕೊಲೆ ಬೆದರಿಕೆ  ತೇಜೋವಧೆಗೆ ಸುಳ್ಳಿನ ಸರಮಾಲೆ ಸೃಷ್ಟಿ  ಸಿಎಂ ಸಿದ್ದರಾಮಯ್ಯ ತೀವ್ರ ಖಂಡನೆ

ಬೆಂಗಳೂರು,ಸೆಪ್ಟಂಬರ್,18,2024 (www.justkannada.in): ಇಂಧಿರಾಗಾಂಧಿ, ರಾಜೀವ್ ಗಾಂಧಿ ದೇಶಕ್ಕಾಗಿ ಹುತಾತ್ಮರಾಗಿದ್ದಾರೆ. ಇಂಥಾ ಉನ್ನತ ತ್ಯಾಗ ಬಲಿದಾನದ ಕುಟುಂಬದಿಂದ ಬಂದು ರಾಹುಲ್ ಗಾಂಧಿ ಅವರು ದೇಶಕ್ಕಾಗಿ ಅವಿರತ ಹೋರಾಟ ನಡೆಸುತ್ತಿದ್ದಾರೆ ಅಜ್ಜಿ ಇಂದಿರಾಗಾಂಧಿ ಅವರಿಗೆ ಆದ ಗತಿಯೇ ನಿಮಗೂ ಆಗುತ್ತದೆ ಎಂದು ರಾಹುಲ್ ಗೆ ಬಿಜೆಪಿ‌ ಬೆದರಿಕೆ ಹಾಕಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವರು  ರಾಹುಲ್ ಗಾಂಧಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ. ಈ ರೀತಿ ಜೀವ ಬೆದರಿಕೆಗಳ ಮೂಲಕ ಬಿಜೆಪಿಯ ಕಾರ್ಯಕರ್ತರನ್ನು ಎತ್ತಿಕಟ್ಟುವ ಷಡ್ಯಂತ್ರ ನಡೆಯುತ್ತಿದೆ ರಾಹುಲ್ ಗಾಂಧಿ ನಾಲಗೆ ಕತ್ತರಿಸಿದವರಿಗೆ 11 ಲಕ್ಷ ಬಹುಮಾನ‌ ಕೊಡುವುದಾಗಿ ಶಿವಸೇನೆಯ ಶಿಂಧೆ ಬಣದ ಶಾಸಕ ಸಂಜಯ್ ಗಾಯಕ್ ವಾಡ್ ಅವರು ರಾಹುಲ್ ಗಾಂಧಿ ನಾಲಗೆ ಕತ್ತರಿಸಲು ಕರೆ ನೀಡಿದ್ದಾರೆ. ಇದೂ ಕೂಡ ಕೊಲೆ ಬೆದರಿಕೆಯೇ ಆಗಿದೆ. ಆದ್ದರಿಂದ ಈ ಕೂಡಲೇ ಸಂಜಯ್ ಗಾಯಕ್ ವಾಡ್ ಮೇಲೆ ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗೆ ತಳ್ಳಬೇಕು ಎಂದು ಆಗ್ರಹಿಸಿದರು.

ಉತ್ತರ ಪ್ರದೇಶದ ಸಚಿವರೊಬ್ಬರು ರಾಹುಲ್ ಗಾಂಧಿ ಈ ದೇಶದ ನಂಬರ್ ಒನ್ ಭಯೋತ್ಪಾದಕ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಇವತ್ತಿನವರೆಗೂ ಬಿಜೆಪಿ ಪಕ್ಷವಾಗಲಿ, ಬಿಜೆಪಿ ಸರ್ಕಾರವಾಗಲಿ, ಕೇಂದ್ರ ಸರ್ಕಾರವಾಗಲಿ ಕಠಿಣ ಕ್ರಮ ತೆಗೆದುಕೊಂಡಿಲ್ಲ. ಕಾಟಾಚಾರಕ್ಕೆ ಕೇಸು ದಾಖಲಿಸಿ ಕೈ ಚೆಲ್ಲಿದ್ದಾರೆ. ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಹೂತು ಹಾಕುವುದಾಗಿ ಸಂಜಯ್ ಗಾಯಕ್ ವಾಡ್ ಮತ್ತೆ ಬೆದರಿಕೆ ಹಾಕಿದ್ದಾನೆ. ರಾಹುಲ್ ಗಾಂಧಿಯವರನ್ನು ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ

ರಾಜಕೀಯವಾಗಿಯೂ ಮುಗಿಸುವ ಜೊತೆಗೆ ಪ್ರಾಣ ಭಯ ಹುಟ್ಟಿಸುವ ಬಿಜೆಪಿ ಷಡ್ಯಂತ್ರ ಆತಂಕಕಾರಿಯಾದದ್ದು.‌ ರಾಹುಲ್ ಗಾಂಧಿ ಅವರಿಗೆ ಜೀವ ಬೆದರಿಕೆ ಹಾಕಿರುವ ಎಲ್ಲರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ತಕ್ಷಣ ಬಂಧಿಸಬೇಕು ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರು ಇದಕ್ಕೆಲ್ಲಾ ಹೆದರುವವರಲ್ಲ  ಎಂದರು.

ನರೇಂದ್ರ ಮೋದಿ ಈ ಬಾರಿ ಐದು ವರ್ಷ ಪೂರೈಸಲ್ಲ

ನರೇಂದ್ರ ಮೋದಿ ಈ ಬಾರಿ ಐದು ವರ್ಷ ಪೂರೈಸಲ್ಲ. ದೇಶದಲ್ಲಿ‌ ಆಗುತ್ತಿರುವ ರಾಜಕಾರಣದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮೋದಿ ಅವರು ಈ ಬಾರಿ ಪೂರ್ಣಾವಧಿ ಮುಗಿಸೋದು ಡೌಟು. ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಅವರು ಹೆಚ್ಚು ದಿನ ಕೇಂದ್ರ ಸರ್ಕಾರದ ಜೊತೆ ಇರುವುದಿಲ್ಲ ಎನ್ನಿಸುತ್ತಿದೆ  ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದರು.

ಅಸಹ್ಯವಾಗಿ ನಾಲಗೆ ಹರಿಬಿಟ್ಟು ಮಹಿಳಾ ಸಮುದಾಯವನ್ನು, ದಲಿತ ಜನಾಂಗವನ್ನು, ಒಕ್ಕಲಿಗ ಸಮುದಾಯವನ್ನು ಅತ್ಯಂತ ಕೆಟ್ಟದಾಗಿ ಅವಹೇಳನ ಮಾಡಿರುವ BJP ಶಾಸಕ ಮುನಿರತ್ನಂ ವಿರುದ್ಧ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕು ಎನ್ನುವ ಬೇಡಿಕೆ ಇದೆ . ಸದ್ಯ ಮುನಿರತ್ನಂ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದರು.

ಪೊಲೀಸರು ತನಿಖೆ ನಡೆಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಮುನಿರತ್ನಂ ಅವರನ್ನು ಜೈಲಿಗೆ ಒಪ್ಪಿಸಿದೆ ಎಂದರು.

Key words: Death threat, Rahul Gandhi, CM Siddaramaiah, condemns

Tags :

.