ರಾಜುಗೌಡನನ್ನು ಸೋಲಿಸುವುದೇ ನನ್ನ ಗುರಿ: ಕಾಂಗ್ರೆಸ್ ಅಭ್ಯರ್ಥಿಯನ್ನು 50 ಸಾವಿರ ಮತಗಳಿಂದ ಗೆಲ್ಲಿಸಿ- ಸಿಎಂ ಸಿದ್ದರಾಮಯ್ಯ ಕರೆ.
ಸುರಪುರ ಮೇ,1,2024 (www.justkannada.in): BJPಯ ರಾಜುಗೌಡನನ್ನು ಸೋಲಿಸುವುದೇ ನನ್ನ ಗುರಿ. ಸುರಪುರ ವಿಧಾನಸಭೆ ಮತ್ತು ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಭರ್ಜರಿ ಬಹುಮತದಿಂದ ಗೆಲ್ಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
ಸುರಪುರ ವಿಧಾನಸಭೆ ಮತ್ತು ರಾಯಚೂರು ಲೋಕಸಭಾ ಚುನಾವಣೆ ಪ್ರಯುಕ್ತ ನಡೆದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು ನೀಡುವಂತೆ ಕರೆ ನೀಡಿ ಮಾತನಾಡಿದರು.
ಸುರಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೂಗೌಡ ನನ್ನ ಬೆಂಬಲ ಇದೆ ಎಂದು ಸುಳ್ಳು ಹೇಳಿ ಅವರಿಗೆ ಮತ ಕೇಳುತ್ತಿದ್ದಾರೆ ಎನ್ನುವ ಸಂಗತಿ ನನ್ನ ಕಿವಿಗೆ ಬಿದ್ದಿದೆ. ಇದು ಅಪ್ಪಟ ಸುಳ್ಳು. ಮೋದಿಯಿಂದ ಹಿಡಿದು ಅಮಿತ್ ಶಾ ಮತ್ತು ರಾಜೂಗೌಡನವರೆಗೂ ಸುಳ್ಳುಗಳ ಸರದಾರರು. ಮನುಷ್ಯರು ಕಲ್ಪಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲದ ಸುಳ್ಳುಗಳನ್ನು ಇವರು ನೀರು ಕುಡಿದಷ್ಟೆ ಸಲೀಸಾಗಿ ಹೇಳುತ್ತಾರೆ. ಇವರ ಸುಳ್ಳುಗಳನ್ನು ನಂಬಿ ಹತ್ತತ್ತು ವರ್ಷ ಮೋಸ ಹೋಗಿದ್ದು ಸಾಕು. ಇನ್ನೂ ಎಷ್ಟು ವರ್ಷ ಬಿಜೆಪಿಯ ಸುಳ್ಳುಗಳಿಗೆ ಮೋಸ ಹೋಗ್ತೀರಿ ಎಂದು ಪ್ರಶ್ನಿಸಿದರು.
ಮೊದಲ ಮತ್ತು ಎರಡನೇ ಹಂತದ ಚುನಾವಣೆಗಳಲ್ಲಿ ಬಿಜೆಪಿ ಸೋಲುತ್ತದೆ ಎನ್ನುವುದು ಮೋದಿಗೆ ಸ್ಪಷ್ಟವಾಗಿ ಗೊತ್ತಾಗಿದೆ. ಬಿಜೆಪಿಯವರೇ ಮಾಡಿಸಿರುವ ಸಮೀಕ್ಷೆಯಲ್ಲೇ ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ. ರಾಷ್ಟ್ರ ಮಟ್ಟದಲ್ಲಿ ಬಿಜೆಪಿ 200 ಸೀಟು ಗೆದ್ದರೆ ಹೆಚ್ಚು ಎನ್ನುವಂತಹ ಸ್ಥಿತಿ ಇದೆ. ಹೀಗಾಗಿ ಸೋಲಿಗೆ ಹೆದರಿ ಮೋದಿ, ಶಾ, ರಾಜುಗೌಡ ಭರ್ಜರಿ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಈ ಸುಳ್ಳುಗಳಿಗೆ ಮರುಳಾಗಬೇಡಿ ಎಂದರು.
ರಾಯಚೂರು ಲೋಕಸಭೆ ಮತ್ತು ಸುರಪುರ ವಿಧಾನಸಭೆ ಎರಡೂ ಕ್ಷೇತ್ರಗಳಲ್ಲೂ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಭರ್ಜರಿ ಬಹುಮತದಿಂದ ಗೆಲ್ಲಿಸಬೇಕು ಎನ್ನುವುದು ನನ್ನ ಗುರಿ. ನನ್ನ ಗುರಿಯನ್ನು ನೀವೆಲ್ಲಾ ಗೆಲ್ಲಿಸಿಕೊಂಡು ಬನ್ನಿ ಎಂದು ಕೈ ಮುಗಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, KPCC ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ , ದಿವಂಗತ ಶಾಸಕ ರಾಜಾ ವೆಂಕಟಪ್ಪನಾಯಕ ಅವರ ಪತ್ನಿ ಮತ್ತು ಪುತ್ರರು ಸೇರಿ ಜಿಲ್ಲಾ ಮತ್ತು ತಾಲ್ಲೂಕು ಹಾಗೂ ಬ್ಲಾಕ್ ಮುಖಂಡರುಗಳು ಉಪಸ್ಥಿತರಿದ್ದರು.
ENGLISH SUMMARY...
My aim is to defeat BJP's Rajugowda: Make Congress candidate win by 50 thousand votes: CM Siddaramaiah calls
From Modi-Amit Shah to Raju Gowda, everyone is a leader of lies: Lies are born from the BJP family: CM
Modi-Shah tells unimaginable lies as easily as drinking water
Surpur May 1: CM Siddaramaiah said that his aim is to defeat BJP's Rajugowda. He called to make Congress candidate win in Surpur Assembly and Raichur Lok Sabha constituency with a huge majority.
Inaugurating the Prajadhwani-2 Jana Samavesh held on the occasion of Surpur Legislative Assembly and Raichur Lok Sabha Elections, he called for a landslide victory for the Congress candidates in both the constituencies.
It has come to my attention that the BJP candidate in Surpur constituency, Raju Gowda, is asking for votes by lying that he has my support. This is an outright lie. From Modi to Amit Shah and Raju Gowda, they are masters of lies. They tell lies as easily as drinking water that humans cannot imagine. It is enough to believe his lies and be deceived for ten years. How many more years will you be deceived by BJP's lies, he asked.
Modi clearly knows that BJP will lose in the first and second phase of elections. Defeat is predicted for them even in the survey conducted by the BJP itself. At the national level, if BJP wins 200 seats, it will be more. So fearing defeat, Modi, Shah, Rajugowda are telling huge lies. Don't be fooled by these lies, the CM said.
My aim is to defeat the BJP and make the Congress candidate win with a huge majority in both the Raichur Lok Sabha and Surpur Assembly constituencies. Chief Minister Siddaramaiah gave a call to all the people help him reach his goal.
AICC president Mallikarjuna Kharge, KPCC president DK Shivakumar, wife and sons of late MLA Raja Venkatappanayaka along with district and taluk and block leaders were present.
Key words: defeat, BJP, Congress, win, CM Siddaramaiah