For the best experience, open
https://m.justkannada.in
on your mobile browser.

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆಪ್ತ ವಿಭವ್‌ ಕುಮಾರ್ ಬಂಧನ

01:45 PM May 18, 2024 IST | prashanth
ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆಪ್ತ ವಿಭವ್‌ ಕುಮಾರ್ ಬಂಧನ

ನವದೆಹಲಿ,ಮೇ,18,2024 (www.justkannada.in):  ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರ ಆಪ್ತ ವಿಭವ್‌ ಕುಮಾರ್ ಅವರನ್ನು ದೆಹಲಿ ಪೊಲೀಸರು ಇಂದು ಬಂಧಿಸಿದ್ದಾರೆ.

ದೆಹಲಿ ಪೊಲೀಸ್ ತಂಡವು ಇಂದು ಸಿಎಂ ಅರವಿಂದ ಕೇಜ್ರಿವಾಲ್ ನಿವಾಸದಲ್ಲೇ ವಿಭವ್ ಕುಮಾರ್ ಅವರನ್ನು ಬಂಧಿಸಿ ಕರೆದೊಯ್ದಿದೆ ಎನ್ನಲಾಗಿದೆ. ಬಿಭವ್‌ ಕುಮಾರ್ ನನ್ನ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ಮಾಲಿವಾಲ್ ದೂರು ನೀಡಿದ್ದರು.

ಈ ಸಂಬಂಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ವಿಭವ್‌ ಕುಮಾರ್ ಅವರನ್ನು ಆರೋಪಿ ಎಂದು ಉಲ್ಲೇಖಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ನ್ಯಾಯಾಧೀಶರ ಎದುರು ಮಾಲಿವಾಲ್ ಹೇಳಿಕೆ ನೀಡಿದ್ದರು.

Key words: Delhi, Bibhav Kumar, arrest, police

Tags :

.