For the best experience, open
https://m.justkannada.in
on your mobile browser.

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ ಶಾಕ್: ಜಾಮೀನಿಗೆ ಹೈಕೋರ್ಟ್ ತಡೆ

12:30 PM Jun 21, 2024 IST | prashanth
ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ ಶಾಕ್  ಜಾಮೀನಿಗೆ ಹೈಕೋರ್ಟ್ ತಡೆ

ನವದೆಹಲಿ, ಜೂನ್​ 21,2024 (www.justkannada.in):  ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ  ದೆಹಲಿ ಹೈಕೋರ್ಟ್ ಶಾಕ್ ನೀಡಿದೆ. ನಿನ್ನೆ ಮಂಜೂರಾಗಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.

ಪ್ರಕರಣದಲ್ಲಿ ಆರೋಪಿಯಾಗಿರುವ ದೆಹಲಿ ಸಿಎಂ  ಅರವಿಂದ್ ಕೇಜ್ರಿವಾಲ್ ಅವರಿಗೆ ನಿನ್ನೆ ಸ್ಥಳೀಯ ನ್ಯಾಯಾಲಯ  ಜಾಮೀನು ನೀಡಿತ್ತು. ಜಾರಿ ನಿರ್ದೇಶನಾಲಯ  ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿರುವುದನ್ನ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಇದೀಗ ವಿಚಾರಣೆ ನಡೆಸಿದ ಹೈಕೋರ್ಟ್ ಅರವಿಂದ ಕೇಜ್ರಿವಾಲ್ ಅವರ ಜಾಮೀನಿಗೆ ತಡೆ ನೀಡಿದೆ.  ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಮಾರ್ಚ್ 21 ರಂದು ಬಂಧಿಸಿತ್ತು. ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಮೇ 10 ರಂದು ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 2 ರಂದು ಅವರು ಸುಪ್ರೀಂ ಕೋರ್ಟ್‌ಗೆ ಶರಣಾಗಿದ್ದರು. ಶರಣಾಗುವ ಮುನ್ನ ಅರವಿಂದ್ ಕೇಜ್ರಿವಾಲ್ ಒಮ್ಮೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಕೇಜ್ರಿವಾಲ್ ಅವರು ತಮ್ಮ ಮಧ್ಯಂತರ ಜಾಮೀನನ್ನು ಏಳು ದಿನಗಳ ಕಾಲ ವಿಸ್ತರಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ ನ್ಯಾಯಾಲಯ ಕೇಜ್ರಿವಾಲ್ ಮನವಿಯನ್ನು ತಿರಸ್ಕರಿಸಿತ್ತು.

Key words:  Delhi, CM, Arvind Kejriwal, High Court, bail

Tags :

.