ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ರಿಲೀಫ್: ಮಧ್ಯಂತರ ಜಾಮೀನು ಮಂಜೂರು.
03:24 PM May 10, 2024 IST
|
prashanth
ದೆಹಲಿ, ಮೇ.10, 2024 (www.justkannada.in): ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿದ್ದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ ಸುಪ್ರೀಂಕೋರ್ಟ್ ಆದೇಶಿಸಿದೆ.
ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಚುನಾವಣಾ ಪ್ರಚಾರಕ್ಕಾಗಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದ್ದು ಹಾಗೂ ಜೂನ್ 2ಕ್ಕೆ ಶರಣಾಗುವಂತೆ ಸೂಚಿಸಿದೆ.
ಈ ಮೂಲಕ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ಅರವಿಂದ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಅವಕಾಶ ನೀಡಿದೆ. ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮಾರ್ಚ್ 21 ರಂದು ಇಡಿ ಅಧಿಕಾರಿಗಳು ಅರವಿಂದ ಕೇಜ್ರಿವಾಲ್ ರನ್ನ ಬಂಧಿಸಿದ್ದರು. 50 ದಿನಗಳ ಬಳಿಕ ಕೇಜ್ರಿವಾಲ್ ಗೆ ಜಾಮೀನು ಮಂಜೂರಾಗಿದೆ.
Key words: Delhi, CM , Arvind Kejriwal, Interim bail
Next Article