For the best experience, open
https://m.justkannada.in
on your mobile browser.

ವಕೀಲ ದೇವರಾಜೇಗೌಡರ ಆರೋಪ ನಿರಾಧಾರ- ಸಚಿವ ಚಲುವರಾಯಸ್ವಾಮಿ.

12:04 PM May 18, 2024 IST | prashanth
ವಕೀಲ ದೇವರಾಜೇಗೌಡರ ಆರೋಪ ನಿರಾಧಾರ  ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಮೇ,18,2024 (www.justkannada.in): ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ 100 ಕೋಟಿ ರೂ ಆಫರ್ ಮಾಡಿದ್ದರು ಎಂದು ಆರೋಪಿಸಿದ್ದ ಬಿಜೆಪಿ ಮುಖಂಡ ವಕೀಲ ದೇವರಾಜೇಗೌಡರಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಚಲುವರಾಯಸ್ವಾಮಿ, ಜನರ ಗಮನ ಬೇರೆಡೆ ಸೆಳೆಯಲು ಸುಳ್ಳು ಆರೋಪ ಮಾಡಿದ್ದಾರೆ. ದೇವರಾಜೇಗೌಡರ ಆರೋಪ ನಿರಾಧಾರ. ದೇವರಾಜೇಗೌಡರ ಮಾತಿಗೆ ಮಾನ್ಯತೆ ಕೊಡುವ ಅಗತ್ಯವಿಲ್ಲ. ಪ್ರಕರಣ ಸಂಬಂಧ ಎಸ್ ಐಟಿ ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ ಎಂದು ತಿಳಿಸಿದ್ದಾರೆ.

ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ 100 ಕೋಟಿ ಆಫರ್ ನೀಡಿದ್ದರು ವಕೀಲ ದೇವರಾಜೇಗೌಡ  ಆರೋಪಿಸಿದ್ದರು. ಡಿಸಿಎಂ ಡಿಕೆ ಶಿವಕುಮಾರ್ ಮಾತ್ರವಲ್ಲದೆ, ಸಚಿವರಾದ ಚೆಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಹೆಸರನ್ನೂ ಉಲ್ಲೇಖ ಮಾಡಿದ್ದರು.

Key words: Devarajegowda, allegation, Minister, Chaluvarayaswamy

Tags :

.