HomeBreaking NewsLatest NewsPoliticsSportsCrimeCinema

ರಾಜ್ಯದಲ್ಲಿ ಕಳೆದೊಂದು ವರ್ಷದಲ್ಲಿ ಅಭಿವೃದ್ಧಿ ಆರಂಭವೇ ಆಗಿಲ್ಲ- ಬಿವೈ ವಿಜಯೇಂದ್ರ ಟೀಕೆ

06:31 PM Aug 29, 2024 IST | prashanth

ಬೆಂಗಳೂರು,ಆಗಸ್ಟ್,29,2024 (www.justkannada.in):  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್ದಿ ಆರಂಭವೇ ಆಗಿಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್ ಸರ್ಕಾರ ಚಾಲನೆಯನ್ನೇ ಕೊಟ್ಟಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕಿಸಿದರು.

ಬೆಂಗಳೂರಿನಲ್ಲಿ  ನಡೆದ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಬಿವೈ ವಿಜಯೇಂದ್ರ, ಮಹಿಳಾ ದೌರ್ಜನ್ಯದ ಸಂದರ್ಭದಲ್ಲೂ ರಾಜ್ಯದ ಕಾಂಗ್ರೆಸ್ ಸರ್ಕಾರ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ. ಈ ದುಷ್ಟ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯ ಹೆಚ್ಚಾಗಿದೆ. ರಾಜ್ಯದ ಜನರು ಈ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಇದು ಜನವಿರೋಧಿ ಸರ್ಕಾರ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣ, ಮುಡಾ ಹಗರಣದ ವಿರುದ್ದ ಹೋರಾಟ ನಡೆಸಿದ್ದೇವೆ.  ವಿಪಕ್ಷವಾಗಿದ್ದಾಗ ಹೋರಾಟಗಳು ಅನಿವಾರ್ಯ.  ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಬರದಿದ್ದರೆ ಗ್ಯಾರಂಟಿ ಸ್ಥಗಿತಗೊಳಿಸುತ್ತೇವೆ ಎಂದು ಕಾಂಗ್ರೆಸ್ ಬೆದರಿಕೆ ಹಾಕಿತ್ತು. ಶಕ್ತಿಯೋಜನೆ ಉಚಿತ ಬಸ್ ಪ್ರಯಾಣದಿಂದ ಶಾಲಾ ಮಕ್ಕಳು ಕಾಲೇಜು ವಿದ್ಯಾರ್ಥಿಗಳು ಪರದಾಟುವ ಪರಿಸ್ಥಿತಿ ಎದುರಾಗಿದೆ. ಶಕ್ತಿಯೋಜನೆ ಹೆಸರಲ್ಲಿ ಮಹಿಳೆಯರ ಮೂಗಿಗೆ ತುಪ್ಪ ಸವರಿದ್ದಾರೆ ಎಂದು ಬಿವೈ ವಿಜಯೇಂದ್ರ ಲೇವಡಿ ಮಾಡಿದರು.

Key words: Development, not started, Congress Govt, BY Vijayendra

Tags :
BY VijayendraCongress Govtdevelopmentnot started
Next Article