ನಾಮಪತ್ರ ವಾಪಸ್ ಪಡೆದ ದಿಂಗಾಲೇಶ್ವರ ಸ್ವಾಮೀಜಿ.
ಧಾರವಾಡ, ಏಪ್ರಿಲ್ ,22,2024 (www.justkannada.in): ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಬಾಳೆಹೊಸೂರು ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಅವರು ನಾಮಪತ್ರವನ್ನ ವಾಪಸ್ ಪಡೆದಿದ್ದಾರೆ.
ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಸೂಚಕಾರದ ಸಚ್ಚಿನ್ ಪಾಟೀಲ್ ಮತ್ತು ಅಮೃತ ಬಳ್ಳೊಳ್ಳಿ ಮೂಲಕ ನಾಮಪತ್ರ ಚುನಾವಣಾ ಆಯೋಗದಿಂದ ತರೆಸಿದ್ದಾರೆ. ದಿಂಗಾಲೇಶ್ವ ಸ್ವಾಮೀಜಿ ಅವರು, ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಅವರನ್ನು ಸೋಲಿಸುವುದು ನನ್ನ ಗುರಿ' ಎಂದಿದ್ದರು.
ಈ ಮೂಲಕ ದಿಂಗಾಲೇಶ್ವರ ಸ್ವಾಮೀಜಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿರುದ್ಧ ಸಮರ ಸಾರಿದ್ದರು. ಅಭ್ಯರ್ಥಿಯನ್ನು ಬದಲಿಸುವಂತೆ ಪಟ್ಟು ಹಿಡಿದಿದ್ದರು. ಇದಕ್ಕೆ ಬಿಜೆಪಿ ಸೊಪ್ಪು ಹಾಕಲಿಲ್ಲ. ಹೀಗಾಗಿ ದಿಂಗಾಲೇಶ್ವರ ಸ್ವಾಮೀಜಿ ಪ್ರಹ್ಲಾದ್ ಜೋಶಿ ವಿರುದ್ಧ ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕೆ ಇಳಿದಿದ್ದರು. ಇದೀಗ ದಿಂಗಾಲೇಶ್ವರ ಶ್ರೀಗಳು ನಾಮಪತ್ರ ಹಿಂಪಡೆದಿದ್ದಾರೆ.
Key words: Dingaleshwara Swamiji, withdrawn, nomination