HomeBreaking NewsLatest NewsPoliticsSportsCrimeCinema

ಡಿ.ಕೆ ಶಿವಕುಮಾರ್ ವಿರುದ್ದದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಹೈಕೋರ್ಟ್ ವಿಸ್ತೃತ ಪೀಠಕ್ಕೆ ವರ್ಗಾವಣೆ.

05:51 PM Jan 05, 2024 IST | prashanth
featuredImage featuredImage

ಬೆಂಗಳೂರು,ಜನವರಿ,5.2024(www.justkannada.in): ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ದದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಯನ್ನ ಹೈಕೋರ್ಟ್ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ.

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ‌ ಮೀರಿದ ಆಸ್ತಿ ಗಳಿಕೆ ಕೇಸ್​​ ಗೆ ಸಂಬಂಧಿಸಿದಂತೆ ಸರ್ಕಾರದ ಆದೇಶದ ವಿರುದ್ಧ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದ್ದು,  ಡಿಕೆ ಶಿವಕುಮಾರ್​​ ಪ್ರಕರಣ ಲೋಕಾಯುಕ್ತ ತನಿಖೆಗೆ ವಹಿಸುವ ಸರ್ಕಾರದ ಕ್ರಮ ಪ್ರಶ್ನಿಸಿ ಇಂದು ಸಿಬಿಐ ಹೈಕೋರ್ಟ್​ಗೆ ಮನವಿ ಸಲ್ಲಿಸಲಾಗಿತ್ತು.

ಹಾಗೆಯೇ ಡಿಕೆ ಶಿವಕುಮಾರ್​ ವಿರುದ್ಧ CBI ತನಿಖೆಗೆ ಅನುಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರನ್ನೊಳಗೊಂಡ ಏಕ ಪೀಠ ವಿಚಾರಣೆಯನ್ನ  ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ.

ಇನ್ನು ಈ ವೇಳೆ ಹೈಕೋರ್ಟ್ ನ್ಯಾಯಪೀಠದ ಮುಂದೆ ಕಾನೂನು ದುರುಪಯೋಗವನ್ನು ರಾಜ್ಯ ಸರ್ಕಾರ ಮಾಡಿಕೊಂಡಿದೆ ಎಂಬುದಾಗಿ ವಾದವನ್ನು ಮಂಡಿಸಲಾಯಿತು. ಈ ವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ಇಂದೊಂದು ಗಂಭೀರ ಪ್ರಕರಣವಾಗಿದ್ದು, ಡಿಕೆ ಶಿವುಕಮಾರ್ ಪ್ರಕರಣವನ್ನು ವಿಸ್ತೃತ ನ್ಯಾಯಪೀಠದಲ್ಲಿ ವಿಚಾರಣೆ ನಡೆಸಲು ವರ್ಗಾವಣೆ ಮಾಡಿ ಆದೇಶಿಸಿದೆ.

ಈ ಮೂಲಕ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ವಿಸ್ತೃತ ನ್ಯಾಯಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.  ಅಲ್ಲದೇ ಈ ಸಂಬಂಧ  ಡಿಸಿಎಂ ಡಿಕೆ ಶಿವಕುಮಾರ್ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್ ಜಾರಿಗೊಳಿಸಿದೆ.

Key words: DK Shivakumar- Illegal – Property-Case- Transferred - High Court -Extended Bench.

Tags :
DK Shivakumar- Illegal – Property-CaseExtended Bench.High Courttransferred