For the best experience, open
https://m.justkannada.in
on your mobile browser.

ಬರಪರಿಹಾರ: ನಾಳೆ ಅಮಿತ್‌ ಷಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ- ಸಿಎಂ ಸಿದ್ದರಾಮಯ್ಯ

04:39 PM Dec 22, 2023 IST | prashanth
ಬರಪರಿಹಾರ  ನಾಳೆ ಅಮಿತ್‌ ಷಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ  ಸಿಎಂ ಸಿದ್ದರಾಮಯ್ಯ

ಮೈಸೂರು, ಡಿಸೆಂಬರ್ 22,2023(www.justkannada.in): ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಷಾ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿ ಕುರಿತು ವಿವರಿಸಲಾಗಿದ್ದು, ಡಿಸೆಂಬರ್‌ 23 ರಂದು ಅಮಿತ್‌ ಷಾ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಪರಿಹಾರ ಬಿಡುಗಡೆ ಕುರಿತು ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರಪರಿಹಾರ ಸೇರಿದಂತೆ ರಾಜ್ಯದ ಬೇಡಿಕೆಗಳಿಗೆ  ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅವುಗಳನ್ನು ಕೇಂದ್ರ ಸರ್ಕಾರ  ಈಡೇರಿಸುವ ಭರವಸೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಆಶಾಭಾವ ವ್ಯಕ್ತಪಡಿಸಿದರು.

ನವದೆಹಲಿಯಲ್ಲಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವರ ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಮನವಿಗೆ ಸಕಾರಾತ್ಮಕ ಸ್ಪಂದನೆ ದೊರಕಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷರಾಗಿದ್ದು, ಅವರು ಬರಪರಿಸ್ಥಿತಿಯ ಬಗ್ಗೆ ನಾಳೆ 23 ರಂದು ಸಭೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

ಪ್ರಧಾನ ಮಂತ್ರಿಯವರನ್ನು ಭೇಟಿಯಾದ ಸಂದರ್ಭದಲ್ಲಿ ಬರ ಪರಿಸ್ಥಿತಿಯ ಜೊತೆಗೆ ಮಹಾದಾಯಿ , ಮೇಕೆದಾಟು, ಭದ್ರಾಮೇಲ್ದಂಡೆ ಯೋಜನೆಗಳ ಬಗ್ಗೆ, ಹಾಗೂ ನರೇಗಾ ಯೋಜನೆಯಡಿ ಮಾನವ ದಿನಗಳನ್ನು 150 ದಿನಗಳಿಗೆ ವಿಸ್ತರಿಸುವ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಲು ಮನವಿ ಮಾಡಲಾಗಿದೆ.

ಪ್ರಧಾನಿ ಮೋದಿಯವರು ಕರ್ನಾಟಕ ಬರ ಪರಿಸ್ಥಿತಿ ಹಾಗೂ ಮೇಲಿನ ಬೇಡಿಕೆಗಳ ಬಗ್ಗೆ ಸಮಾಧಾನಚಿತ್ತರಾಗಿ ಆಲಿಸಿ, ಸಂಬಂಧಪಟ್ಟ ಸಚಿವರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದರು.

ಕೋವಿಡ್ – ಜನರು ಆತಂಕ ಪಡಬೇಕಾಗಿಲ್ಲ

ಮೈಸೂರಿನಲ್ಲಿ 6 ಜನರಿಗೆ ಕೋವಿಡ್ ತಗುಲಿದ್ದು, ಅವರಿಗೆ ಇತರೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಭವಿಷ್ಯದಲ್ಲಿ ಪ್ರವಾಸಿ ತಾಣಗಳನ್ನು ಬಂದ್ ಮಾಡುವ ಸಾಧ್ಯತೆ ಇದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಈಗ ಸದ್ಯದ ಪರಿಸ್ಥಿತಿಯಲ್ಲಿ ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ. ಆದರೆ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ENGLISH SUMMARY...

Drought Relief: High Level committee chaired by Amit Shah to hold meeting tomorrow

Mysore, December 22: The Chief Minister Siddaramaiah said that drought situation has been explained during the meeting with the Prime Minister and Home Minister Amit Shah and decision about drought relief is likely to be taken in a high level meeting chaired by Amit on 23rd of this month.

He was speaking to the media at Mysore.

The Central Government has responded positively to the demands of the State including drought relief and we hope the demands will be fulfilled, the CM said.

During the meeting with the Prime Minister , it was requested to take necessary decision regarding the Mahadayi, Mekedatu, Bhadra Upper Bank projects and extension of man days to 150 days under the MGNREGA scheme. Prime Minister Modi listened to the Karnataka’s plea patiently and said to discuss with the concerned ministers and take action.

COVID – people need not panic

Responding to the question of reporter, whether tourist spots are likely to be closed in the future, the CM said that , Mysore has recorded 6 cases of COVID who are also suffering from other health issues. There is no need to panic in the current situation. But people should be cautious and the recommendations of the technical advisory committee should be mandatorily followed .

Key words: Drought Relief-  Decision -Amit Shah- tomorrow- CM -Siddaramaiah

Tags :

.