For the best experience, open
https://m.justkannada.in
on your mobile browser.

ಗ್ಯಾರಂಟಿಗಳ ಮೂಲಕ ಜನರಿಗೆ ಆರ್ಥಿಕ, ಸಾಮಾಜಿಕ ಶಕ್ತಿ : ಸಿಎಂ ಸಿದ್ದರಾಮಯ್ಯ.

03:06 PM Jan 12, 2024 IST | prashanth
ಗ್ಯಾರಂಟಿಗಳ ಮೂಲಕ ಜನರಿಗೆ ಆರ್ಥಿಕ  ಸಾಮಾಜಿಕ ಶಕ್ತಿ   ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ,ಜನವರಿ 12,2024(www.justkannada.in):   ಬಡವರು ಹಾಗೂ ಮಧ್ಯಮ ವರ್ಗದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಿ ಮುಖ್ಯವಾಹಿನಿಗೆ ಬರುವಂತಾಗಬೇಕೆಂಬ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯದ ತತ್ವದಂತೆ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, 1.18 ಕೋಟಿ ಮಹಿಳಾ ಯಜಮಾನಿಗೆ ತಿಂಗಳಿಗೆ 2000 ನೀಡುತ್ತಿರುವುದು ಸತ್ಯವಲ್ಲವೇ ? ಇದುವರೆಗೆ ಯಾವುದೇ ಜಾತಿ ಧರ್ಮ ಭಾಷೆ ಬೇಧವಿಲ್ಲದೇ ಮಹಿಳೆಯರು ಶಕ್ತಿ ಯೋಜನೆಯ ಮೂಲಕ ಉಚಿತವಾಗಿ ಪ್ರಯಾಣಿಸಿರುವುದು ಸುಳ್ಳಾಗುವುದು ಸಾಧ್ಯವೇ? 200 ಯೂನಿಟ್ ವರೆಗೆ ಉಚಿತ ವಿದ್ಯುತ್1.51 ಕೋಟಿ ಜನರಿಗೆ ನೀಡಲಾಗುತ್ತಿದೆ. ಅನ್ನಭಾಗ್ಯ ಯೋಜನೆಯಡಿ  170 ರೂ. ಫಲಾನುಭವಿಗಳಿಗೆ ತಲುಪುತ್ತಿದೆ. ಈ ಎಲ್ಲ ಸತ್ಯಗಳನ್ನು ಪರಿಶೀಲನೆ ನಡೆಸಿ ಮಾಧ್ಯಮದವರು ಸತ್ಯವಾದುದನ್ನು ಬರೆಯಬೇಕು ಎಂದರು.

ಬಡವರಿಗೆ ಆರ್ಥಿಕ ಶಕ್ತಿ ತುಂಬಬೇಕು

ಗ್ಯಾರಂಟಿ ಯೋಜನೆಗಳಿಂದ ಒಂದು ಕುಟುಂಬ ಕ್ಕೆ 4 ರಿಂದ 5 ಸಾವಿರ ರೂ.ಗಳು ಸೇರುತ್ತಿದ್ದು, ವರ್ಷಕ್ಕೆ 48 ರಿಂದ 50 ಸಾವಿದ ರೂ.ಗಳು ಸೇರುತ್ತದೆ. ಇದು  ಬಡಜನರಿಗೆ ಸೌಲಭ್ಯ ನೀಡುತ್ತದೆ. ಬೆಲೆಯೇರಿಕೆ,  ನಿರುದ್ಯೋಗ ಹೆಚ್ಚಾಗಿದ್ದು, ಬಡವರಿಗೆ ಕೊಂಡುಕೊಳ್ಳುವ ಶಕ್ತಿ ಯನ್ನು ಈ ಯೋಜನೆಗಳು ಹೆಚ್ಚಿಸುತ್ತವೆ ಎಂದರು

 ಯುವನಿಧಿ ಯೋಜನೆಗೆ ಇಂದು ಚಾಲನೆ:

ಇಂದು ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿಯನ್ನು ಜಾರಿಗೊಳಿಸಲಾಗುತ್ತಿದೆ. ಪದವಿ ಪಡೆದ ನಿರುದ್ಯೋಗಿಗಳಿಗೆ 3000 ರೂ. ಹಾಗೂ ಡಿಪ್ಲೋಮಾ ಮಾಡಿದ ನಿರುದ್ಯೋಗಿಗಳಿಗೆ 1,500 ರೂ. ಭತ್ಯೆಯನ್ನು 2 ವರ್ಷಗಳ ಕಾಲ ನೀಡುವ ಯೋಜನೆಯಾಗಿದೆ. ಈ ಅವಧಿಯಲ್ಲಿ ಭತ್ಯೆಯ ಜೊತೆಗೆ ಉದ್ಯೋಗ ಲಭಿಸಲು ಬೇಕಾದಂತಹ ಕೌಶಲ್ಯವನ್ನು ಅಭಿವೃದ್ಧಿಗೊಳಿಸಲು ಕೌಶಲ್ಯ ತರಬೇತಿಯನ್ನು ನೀಡಲಾಗುವುದು.  ಈ ಎರಡು ವರ್ಷದೊಳಗೆ ಸರ್ಕಾರಿ, ಖಾಸಗಿ ಅಥವಾ ಸ್ವಯಂ ಉದ್ಯೋಗ ದೊರೆತಲ್ಲಿ ಯುವನಿಧಿ ಭತ್ಯೆಯನ್ನು ನೀಡಲಾಗುವುದಿಲ್ಲ. ಕೈಗಾರಿಕೆಗಳಲ್ಲಿ ಬೇಡಿಕೆಯಿರುವ ಕೌಶಲ್ಯದ ತರಬೇತಿಯನ್ನು ನೀಡಲಾಗುತ್ತಿದ್ದು, ತರಬೇತಿಯ ಅವಧಿಯನ್ನು ಸಂಬಂಧಪಟ್ಟ ಇಲಾಖೆ ನಿರ್ಧರಿಸಲಿದೆ ಎಂದರು.

Key words: Economic- social power- people -through –guarantees- CM Siddaramaiah.

Tags :

.