For the best experience, open
https://m.justkannada.in
on your mobile browser.

ಕಾಂಗ್ರೆಸ್​ ಶಾಸಕ ನಾ.ರಾ ಭರತ್ ರೆಡ್ಡಿ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ.

12:26 PM Feb 10, 2024 IST | prashanth
ಕಾಂಗ್ರೆಸ್​ ಶಾಸಕ ನಾ ರಾ ಭರತ್ ರೆಡ್ಡಿ ನಿವಾಸದ ಮೇಲೆ ಇಡಿ ದಾಳಿ  ಪರಿಶೀಲನೆ

ಬಳ್ಳಾರಿ, ಫೆಬ್ರವರಿ 10,2024(www.justkannada.in):  ಆದಾಯ ಮೀರಿ ಆಸ್ತಿಗಳಿಕೆ ಆರೋಪದ ಮೇಲೆ ಕಾಂಗ್ರೆಸ್​ ಶಾಸಕನಾ.ರಾ. ಭರತ್ರೆಡ್ಡಿನಿವಾಸದಮೇಲೆಜಾರಿ ನಿರ್ದೇಶನಾಲಯ ಅಧಿಕಾರಿಗಳುದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಇಂದು ಇಂದು ಬೆಳಗ್ಗೆ 6:30ಕ್ಕೆ ಏಕಕಾಲಕ್ಕೆ ಆಗಮಿಸಿದ ಇಡಿ ಅಧಿಕಾರಿಗಳು ಶಾಸಕ ನಾರಾಭರತ ರೆಡ್ಡಿ ಮನೆ, ತಂದೆಯ ಕಚೇರಿ, ಚಿಕ್ಕಪ್ಪ ಪ್ರತಾಪ ರೆಡ್ಡಿ ಮನೆ ಮತ್ತು ಕಚೇರಿಯ ಮೇಲೆ ದಾಳಿ ಮಾಡಿದ್ದು ಮಹತ್ವದ ದಾಖಲೆ ಪತ್ರಗಳನ್ನು ತಮ್ಮ ವಶಕ್ಕೆ ಪಡೆದುಕೊಂಡು ಪರಿಶೀಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಶಾಸಕ ನಾರಾ ಭರತ್ ರೆಡ್ಡಿ ನಿವಾಸಕ್ಕೆ ಭದ್ರತಾ ಸಿಬ್ಬಂದಿಯೊಂದಿಗೆ ಆಗಮಿಸಿದ ಇಡಿ ಅಧಿಕಾರಿಗಳು ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಅಂತ ತಿಳಿದು ಬಂದಿದೆ. ಶಾಸಕ ನಾರಾಭರತ್ ರೆಡ್ಡಿ ಕುಟುಂಬ ಗ್ರಾನೈಟ್ ಬಿಸಿನೆಸ್ ಮಾಡುತ್ತಿದೆ.

Key words: ED attack - residence -Congress MLA -Na.Ra Bharat Reddy- inspection.

Tags :

.