HomeBreaking NewsLatest NewsPoliticsSportsCrimeCinema

ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಸ್ಪದ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ.

12:51 PM May 17, 2024 IST | prashanth

ಬೆಂಗಳೂರು,ಮೇ,17,2024 (www.justkannada.in):  ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ  ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಅನೇಕಲ್ ತಾಲ್ಲೂಕಿನ ಚಂದಾಪುರದ ಹಿಲಲಿಗೆ  ಬಳಿ ಇರುವ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಕಾಲೇಜಿನ ಹಾಸ್ಟೇಲ್ ನಲ್ಲಿ ವಿದ್ಯಾರ್ಥಿನಿ ಹರ್ಷಿತಾ(18) ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತ ವಿದ್ಯಾರ್ಥಿಯನ್ನು ಅರಸೀಕರೆ ಮೂಲದ ಕರಡಿಹಳ್ಳಿ ಗ್ರಾಮದ ಹರ್ಷಿತಾ ಎಂದು ಗುರುತಿಸಲಾಗಿದೆ. ಹರ್ಷಿತಾ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು, ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ವಿದ್ಯಾರ್ಥಿನಿ ಹರ್ಷಿತಾ ಸಾವು ಖಂಡಿಸಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಸ್ಥಳಕ್ಕೆ ಸೂರ್ಯನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Engineering, student, suspicious, death

Tags :
Engineering -student -suspicious -death
Next Article