ನಟ ದರ್ಶನ್ ಮತ್ತು ಇತರೆ ಆರೋಪಿ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
01:55 PM Sep 12, 2024 IST
|
prashanth
ಬೆಂಗಳೂರು,ಸೆಪ್ಟಂಬರ್,12,2024 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನ ನ್ಯಾಯಾಲಯ ಮತ್ತೆ1 ದಿನ ವಿಸ್ತರಣೆ ಮಾಡಿದೆ.
ಇಂದು ನಟ ದರ್ಶನ್ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಅಂತ್ಯವಾದ ಹಿನ್ನೆಲೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.
ವಿಚಾರಣೆ ನಡೆಸಿದ 24 ನೇ ಎಸಿಎಂಎಂ ಕೋರ್ಟ್ ಎಲ್ಲಾ ಆರೋಪಿಗಳಿಗೆ ಮತ್ತೆ 1 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು ಕೇಸ್ ನಲ್ಲಿ ನಟ ದರ್ಶನ್ ಭಾಗಿಯಾಗಿರುವುದು ದೃಢವಾಗಿದೆ.
Key words: Extension, judicial custody, actor, Darshan
Next Article