ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್ ನೀಡಿದ ವಿದೇಶಾಂಗ ಸಚಿವಾಲಯ.
04:15 PM May 24, 2024 IST
|
prashanth
ನವದೆಹಲಿ, ಮೇ 24,2024 (www.justkannada.in): ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಬೆನ್ನಲ್ಲೆ ವಿದೇಶದಲ್ಲಿ ಪರಾರಿಯಾಗಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ವಿದೇಶಾಂಗ ಸಚಿವಾಲಯ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದುಗೊಳಿಸುವಂತೆ ಎಸ್ಐಟಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಬೆನ್ನಲೇ ಇದೀಗ ವಿದೇಶಾಂಗ ಸಚಿವಾಲಯವು, ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ವಿದೇಶಕ್ಕೆ ಯಾವ ಕೆಲಸದ ಮೇಲೆ ವಿದೇಶಕ್ಕೆ ಹೋಗಲಾಗಿದೆ. ಹಾಗೇ ವಿದೇಶದಿಂದ ವಾಪಾಸ್ ಬರುವ ಬಗ್ಗೆಯೂ ಮಾಹಿತಿ ನೀಡಬೇಕಿದೆ. ಅಲ್ಲದೇ ಯಾಕೆ ಪಾಸ್ ಪೋರ್ಟ್ ರದ್ದು ಮಾಡಬಾರದು ಎಂಬುದಕ್ಕೆ ಸಮಜಾಯಿಸಿ ನೀಡಬೇಕಿದೆ. ಈ ಎಲ್ಲಾ ಮಾಹಿತಿಯನ್ನು ವಿದೇಶಾಂಗ ಸಚಿವಾಲಯಕ್ಕೆ 10 ದಿನಗಳ ಒಳಗೆ ಪ್ರಜ್ವಲ್ ರೇವಣ್ಣ ಮಾಹಿತಿ ನೀಡಬೇಕಿದೆ.
Key words: External Affairs, Ministry ,notice, Prajwal Revanna
Next Article