HomeBreaking NewsLatest NewsPoliticsSportsCrimeCinema

ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲು.

01:36 PM Oct 31, 2023 IST | prashanth

ಬೆಂಗಳೂರು, ಅಕ್ಟೋಬರ್,31,2023(www.justkannada.in): ಡಿಸಿಎಂ  ಡಿ.ಕೆ ಶಿವಕುಮಾರ್  ಗೆ  ಪುಕ್ಕಲ, ಮೋಸಗಾರ, ಸಿಡಿ ಮಾಸ್ಟರ್, ಮಾಜಿ ಮಂತ್ರಿಯಾಗುತ್ತಾರೆ  ಎಂದು ಹೇಳಿ ಏಕವಚನದಲ್ಲಿ ಮಾತನಾಡಿದ   ಆರೋಪದ ಮೇಲೆ ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ದೂರು ನೀಡಿದ್ದಾರೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು ಬಿಜೆಪಿ ಶಾಸಕ ರಮೇಶ್ ಜಾರಕೊಹೊಳಿ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಿನ್ನೆಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ರಮೇಶ್ ಜಾರಕಿಹೊಳಿ ಅವರು ಡಿಕೆ ಶಿವಕುಮಾರ್ ವಿರುದ್ಧ ಆಕ್ಷೇಪರ್ಹ ಪದ ಬಳಕೆ ಮಾಡಿದ್ದಾರೆ. ಅಲ್ಲದೇ ಆಧಾರ ರಹಿತ ಕೆಲ ಆರೋಪಗಳನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Key words: File – complaint- against -former minister- Ramesh Jarakiholi.

Tags :
File – complaint- against -former minister- Ramesh Jarakiholi.
Next Article