For the best experience, open
https://m.justkannada.in
on your mobile browser.

ಒಳ ಮೀಸಲಾತಿ ಬಗ್ಗೆ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ- ಗೃಹ ಸಚಿವ ಡಾ.ಜಿ.ಪರಮೇಶ್ವರ್.

10:57 AM Jan 18, 2024 IST | prashanth
ಒಳ ಮೀಸಲಾತಿ ಬಗ್ಗೆ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ  ಗೃಹ ಸಚಿವ ಡಾ ಜಿ ಪರಮೇಶ್ವರ್

ಬೆಂಗಳೂರು,ಜನವರಿ,18,2024(www.justkannada.in): ಒಳ ಮೀಸಲಾತಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಒಳ ಮೀಸಲಾತಿ ಬಗ್ಗೆ ಅಂತಿಮ ನಿರ್ಣಯ ತೆಗೆದುಕೊಳ್ಳಲು ನಿರ್ಧಾರ ಮಾಡಿದ್ದೇವೆ. ಹಿಂದಿನ ಸರ್ಕಾರದಲ್ಲಿ ಚಿತ್ರದುರ್ಗ ಸಮಾವೇಶ ಮಾಡಿ ನಿರ್ಣಯ ಮಾಡಲಾಗಿತ್ತು.  ನ್ಯಾ ಸದಾಶಿವ ಆಯೋಗದ ವರದಿ ಬಗ್ಗೆ ನಿರ್ಣಯಕ್ಕೆ ತೀರ್ಮಾನ ಮಾಡಲಾಗಿದೆ. ಈ ಹಿಂದೆ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ವರದಿ ತಿರಸ್ಕಾರ ಮಾಡಿದ್ದರು. ಕಾನೂನಾತ್ಮಕವಾಗಿ ಒಳ ಮೀಸಲಾತಿ ಕೊಡಬೇಕಾಗುತ್ತದೆ . ನಾವೇ ಸಂವಿಧಾನ ತಿದ್ದುಪಡಿ ತರಲು ಆಗಲ್ಲ. ಹೀಗಾಗಿ ಶಿಫಾರಸ್ಸು ಮಾಡುವ ಬಗ್ಗೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಬಾಬ್ರಿ ಮಸೀದಿಯಂತೆ ಇತರೆ ಮಸೀದಿ ನಿರ್ನಾಮ ಮಾಡುತ್ತೇವೆ ಎಂಬ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ಕಿಡಿಕಾರಿದ ಡಾ.ಜಿ.ಪರಮೇಶ್ವರ್, ಅನಂತ್ ಕುಮಾರ್ ಹೆಗಡೆ ಸಂಯಮದಿಂದ ವರ್ತಿಸಲಿ. ಪೊಲೀಸರು ಹೆಗಡೆಗೆ ಸಮಯ ನೀಡಿದ್ದಾರೆ . ಅದನ್ನ ಅರ್ಥ ಮಾಡಿಕೊಳ್ಳಬೇಕು.  ಅನಂತ್ ಕುಮಾರ್ ಹೆಗಡೆ ಮಾತು ಮುಂದುವರೆಸಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

Key words: Final decision- regarding -internal reservation -cabinet meeting - Home Minister- Dr. G. Parameshwar.

Tags :

.