For the best experience, open
https://m.justkannada.in
on your mobile browser.

ರೈತರ ಬರ ಪರಿಹಾರದ ಹಣ ಸಾಲದ ಖಾತೆಗೆ ಜಮೆ: ರಾಜ್ಯ ಸರಕಾರದ ವಿರುದ್ಧ ಮಾಜಿ ಸಿಎಂ ಎಚ್ಡಿಕೆ ಕಿಡಿ

10:23 AM May 16, 2024 IST | prashanth
ರೈತರ ಬರ ಪರಿಹಾರದ ಹಣ ಸಾಲದ ಖಾತೆಗೆ ಜಮೆ  ರಾಜ್ಯ ಸರಕಾರದ ವಿರುದ್ಧ ಮಾಜಿ ಸಿಎಂ ಎಚ್ಡಿಕೆ ಕಿಡಿ

ಮೈಸೂರು, ಮೇ 16, 2024 (www.justkannada.in): ಬರ ಪರಿಹಾರದ ಹಣವನ್ನು ಬ್ಯಾಂಕ್​ಗಳು ಸಾಲದ ಖಾತೆಗೆ ಜಮೆ ಮಾಡಿಕೊಳ್ಳುತ್ತಿರುವುದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬ್ಯಾಂಕ್​ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯ ಎಂದಿದ್ದಾರೆ. ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಕಣ್ಣೀರು ಒರೆಸಿ ಬೆಂಬಲಕ್ಕೆ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರಕಾರ ಕೈಕಟ್ಟಿ ಕೂತಿದೆ. ಕೇಂದ್ರ ಸರಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್​ಗಳ ವರ್ತನೆ ನಿಜಕ್ಕೂ ಖಂಡನೀಯ ಎಂದು ಟ್ವೀಟ್ ಮಾಡಿದ್ದಾರೆ.

ರಾಜ್ಯ ಸರಕಾರ ಕೂಡಲೇ ಸಾಲ ನೀಡಿರುವ ಎಲ್ಲಾ ಬ್ಯಾಂಕ್​​ಗಳ ಮುಖ್ಯಸ್ಥರ ಸಭೆ ಕರೆದು, ಈ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಬೇಕು. ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು ಎಂದು ತಾಕೀತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Tags :

.