HomeBreaking NewsLatest NewsPoliticsSportsCrimeCinema

ಮಾಜಿ ಸಚಿವ ಬಿ. ನಾಗೇಂದ್ರ ಐದು ದಿನ ಇಡಿ ಕಸ್ಟಡಿಗೆ

03:54 PM Jul 18, 2024 IST | prashanth

ಬೆಂಗಳೂರು,ಜುಲೈ,18,2024 (www.justkannada.in):  ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ಬಿ.ನಾಗೇಂದ್ರರನ್ನು ಐದು ದಿನಗಳ ಕಾಲ ಜಾರಿ ನಿರ್ದೇಶನಾಲಯ(ED) ಕಸ್ಟಡಿಗೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನ ಇಡಿ ಅಧಿಕಾರಿಗಳು ಬಂಧಿಸಿದ್ದು, ಇಂದು ಇಡಿ ಕಸ್ಟಡಿ ಅವಧಿ ಮುಕ್ತಾಯವಾಗಿತ್ತು. ಈ ಹಿನ್ನೆಲೆಯಲ್ಲಿ ನಾಗೇಂದ್ರ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಇಡಿ ಅಧಿಕಾರಿಗಳು  ಮತ್ತಷ್ಟು ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು.

ಅಧಿಕಾರಿಗಳ ಮನವಿ ಆಲಿಸಿದ ನ್ಯಾಯಾಲಯ ಮತ್ತೆ ಐದು ದಿನಗಳ ಕಾಲ ಅಂದರೆ ಜುಲೈ 22ರವರೆಗೆ  ಶಾಸಕ ನಾಗೇಂದ್ರ ಅವರನ್ನು ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

Key words: Former Minister, B. Nagendra, ED custody

Tags :
B. Nagendra.ED custodyFormer Minister
Next Article