ಮಾಜಿ ಸಚಿವ ಬಿ.ನಾಗೇಂದ್ರಗೆ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ
ಬೆಂಗಳೂರು,ಆಗಸ್ಟ್,5,2024 (www.justkannada.in): ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಈ ಕುರಿತಂತೆ ಇಂದು ಬೆಂಗಳೂರಿನ 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಮಾಜಿ ಸಚಿವ ಬಿ.ನಾಗೇಂದ್ರ ಅವರ ನ್ಯಾಯಾಂಗ ಬಂಧನ ಅವಧಿಯನ್ನ ವಿಸ್ತರಣೆ ಮಾಡಿದೆ. ಇಂದು ಬಿ.ನಾಗೇಂದ್ರ ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಇಂದು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳಿಂದ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಂಧಿಸಲಾಗಿತ್ತು. ಆ ಬಳಿಕ ಅವರನ್ನು ಕೋರ್ಟ್ ಗೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಇತ್ತ ಪ್ರಕರಣ ಸಂಬಂಧ ಎಸ್ ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಪ್ರಾಥಮಿಕ ಆರೋಪಪಟ್ಟಿಯನ್ನ ಸಲ್ಲಿಕೆ ಮಾಡಿದ್ದಾರೆ.
Key words: former minister, B. Nagendra, judicial custody, extended