For the best experience, open
https://m.justkannada.in
on your mobile browser.

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರ ಪಿಎ ಬಂಧನ

03:34 PM Jul 10, 2024 IST | prashanth
ವಾಲ್ಮೀಕಿ ನಿಗಮ ಹಗರಣ  ಮಾಜಿ ಸಚಿವ ಬಿ ನಾಗೇಂದ್ರ ಪಿಎ ಬಂಧನ

ಬೆಂಗಳೂರು, ಜುಲೈ 10,2024 (www.justkannada.in):  ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ  ಬಹಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ  ಆಪ್ತಸಹಾಯಕ ಹರೀಶ್‌ ಎಂಬುವವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.

ಹಗರಣಕ್ಕೆ ಸಂಬಂಧ ಇಡಿ ಅಧಿಕಾರಿಗಳು ಇಂದು ಬೆಳಗ್ಗೆ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್​​ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಿದ್ದರು.

ಬಂಧಿತ ಹರೀಶ್​ ಅವ್ಯವಹಾರದ ವೇಳೆ ಅಧಿಕಾರಿಗಳಿಗೆ ಮೌಖಿಕ ಸೂಚನೆ ನೀಡಿದ್ದು,  ಸಚಿವರ ಪರವಾಗಿ ಒತ್ತಡ ಹಾಕಿ ಹಣದ ವಹಿವಾಟು ನಡೆಸಿರುವ ಆರೋಪದ ಮೇಲೆ ಬಂಧಿಸಲಾಗಿದೆ. ಹೆಚ್ಚಿನ ವಿಚಾರಣೆಯ ಅಗತ್ಯವಿರುವ ಕಾರಣ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಪಿಎ ಹರೀಶ್​ ರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

Key words: Former Minister, B. Nagendra, PA, Arrested

Tags :

.