ಮಾಜಿ ಸಿಎಂ ಹೆಚ್.ಡಿಕೆ ಭೇಟಿಯಾಗಿ ಚರ್ಚಿಸಿದ ಮಾಜಿ ಸಚಿವ ಡಾ.ಕೆ.ಸುಧಾಕರ್.
01:46 PM Jan 15, 2024 IST
|
prashanth
ಬೆಂಗಳೂರು,ಜನವರಿ,15,2024(www.justkannada.in): ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಮೈತ್ರಿಯಾದ ಬೆನ್ನಲ್ಲೆ ಹಲವು ಬಿಜೆಪಿ ನಾಯಕರು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಭೇಟಿಯಾಗುತ್ತಿದ್ದಾರೆ. ಈ ಮಧ್ಯೆ ಇದೀಗ ಮಾಜಿ ಸಚಿವ ಡಾ.ಕೆ.ಸುಧಾಕರ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಉಭಯ ಪಕ್ಷಗಳ ನಡುವೆ ಸೀಟು ಹಂಚಿಕೆ ಲೆಕ್ಕಾಚಾರ ಆರಂಭವಾಗಿದೆ. ಇತ್ತೀಚೆಗಷ್ಟೆ. ಮಾಜಿ ಸಚಿವ ಸಿ.ಟಿ ರವಿ ನಂತರ ಸಂಸದ ಪ್ರತಾಪ್ ಸಿಂಹ ಅವರು ಹೆಚ್.ಡಿ ಕುಮಾರಸ್ವಾಮಿ ಅವರನ್ನ ಭೇಟಿಯಾಗಿದ್ದರು.
ಇದೀಗ ಬಿಡದಿ ತೋಟದ ಮನೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಮಾಜಿ ಸಚಿವ ಸುಧಾಕರ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಸುಧಾಕರ್ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದೆ.
Key words: former minister-Dr. K. Sudhakar -met - former CM- H.D Kumaraswamy
Next Article