ಬಿ.ಎಲ್ ಸಂತೋಷ್ ಭೇಟಿಯಾದ ಮಾಜಿ ಸಚಿವ ವಿ.ಸೋಮಣ್ಣ.
01:02 PM Jan 09, 2024 IST
|
prashanth
ನವದೆಹಲಿ,ಜನವರಿ,9,2024(www.justkannada.in): ಮಾಜಿ ಸಚಿವ ವಿ.ಸೋಮಣ್ಣ ಇಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ಸ್ವಪಕ್ಷದ ನಾಯಕರ ವಿರುದ್ದವೇ ವಿ.ಸೋಮಣ್ಣ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ನಿನ್ನೆ ಪಕ್ಷದ ವರಿಷ್ಠರ ಭೇಟಿಗಾಗಿ ದೆಹಲಿಗೆ ತೆರಳಿರುವ ವಿ.ಸೋಮಣ್ಣ ಇಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಕೆಲ ಕಾಲ ಚರ್ಚೆ ನಡೆಸಿದರು.
ಹಾಗೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೂ ವಿ.ಸೋಮಣ್ಣ ಸಮಯ ಕೇಳಿದ್ದು ಇಂದು ಸಂಜೆ ಅಥವಾ ನಾಳೆ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ ಎನ್ನಲಾಗುತ್ತಿದೆ.
Key words: Former minister- V. Somanna- met- B. L. Santhosh.
Next Article