ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಆಸ್ಪತ್ರೆಗೆ ದಾಖಲು.
05:43 PM Feb 15, 2024 IST
|
prashanth
ಬೆಂಗಳೂರು,ಫೆಬ್ರವರಿ,15,2024(www.justkannada.in): ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡರಿಗೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ದೇವೇಗೌಡರಿಗೆ ಇಂದು(ಗುರುವಾರ) ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
Key words: Former Prime Minister -HD Deve Gowda- admitted - hospital
Next Article