For the best experience, open
https://m.justkannada.in
on your mobile browser.

ಸಿಲಿಂಡರ್ ಸೋರಿಕೆಯಾಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ.

12:07 PM May 22, 2024 IST | prashanth
ಸಿಲಿಂಡರ್ ಸೋರಿಕೆಯಾಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

ಮೈಸೂರು,ಮೇ,22,2024 (www.justkannada.in): ಸಿಲಿಂಡರ್ ಸೋರಿಕೆಯಾಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದೆ.

ಪತಿ, ಪತ್ನಿ ಇಬ್ಬರು ಮಕ್ಕಳು ಮಲಗಿದ್ದಲ್ಲಿಯೇ ಸಾವನ್ನಪ್ಪಿದ್ದಾರೆ. ಕುಮಾರಸ್ವಾಮಿ(45), ಪತ್ನಿ ಮಂಜುಳ(39)ಮಕ್ಕಳಾದ ಅರ್ಚನಾ(19), ಸ್ವಾತಿ(17) ಮೃತಪಟ್ಟವರು. ಮಲಗಿದ್ದ ವೇಳೆ ಸಿಲಿಂಡರ್ ಸೋರಿಕೆಯಾಗಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಮೃತರು ಚಿಕ್ಕಮಗಳೂರು ಜಿಲ್ಲೆಯ ಕಡೂರಿನವರಾಗಿದ್ದು, ಭಾನುವಾರ ಕುಟುಂಬಸ್ಥರ ಮದುವೆಗೆ ತೆರಳಿದ್ದರು. ಸೋಮವಾರ ವಾಪಸ್ ಬಂದಿದ್ದರು. ಸೋಮವಾರ ರಾತ್ರಿ ಮನೆಯಲ್ಲಿ ಮಲಗಿದ್ದರು. ಹೊರಗೆ ಬಾರದ ಹಿನ್ನಲೆ, ಸಮೀಪದ ಮನೆಯವರು ಬಾಗಿಲು ಓಪನ್ ಮಾಡಿದಾಗ ಮೃತಪಟ್ಟಿರೊದು ಬೆಳಕಿಗೆ ಬಂದಿದೆ.

ಮೃತರು ಬಟ್ಟೆ ಐರನ್ ಮಾಡುವ ಕೆಲಸ ಮಾಡುತ್ತಿದ್ದರು. ಇನ್ನು ಘಟನಾ ಸ್ಥಳಕ್ಕೆ ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Four members, died, cylinder- leakage, mysore

Tags :

.