For the best experience, open
https://m.justkannada.in
on your mobile browser.

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಓರ್ವ ಸಾವು

02:33 PM Jun 08, 2024 IST | prashanth
ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ  ಓರ್ವ ಸಾವು

ಚಾಮರಾಜನಗರ,ಜೂನ್,8,2024 (www.justkannada.in): ಒಂದೇ ಕುಟುಂಬ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಓರ್ವ ಸಾವನ್ನಪ್ಪಿರುವ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ತಾಳಬೆಟ್ಟದಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ಕೆ ಆರ್ ನಗರ ತಾಲೂಕಿನ ಚಂದಗಾಲು ಗ್ರಾಮದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪತಿ ಮಹಾದೇವನಾಯಕ, ಪತ್ನಿ  ಗೌರಮ್ಮ, ಮಗಳು ಲೀಲಾವತಿ, ಮೊಮ್ಮಗಳು ರಿಷಿಕಾ ಎಂಬ ನಾಲ್ವರು ಕ್ರಿಮಿನಾಶಕ ಸೇವಿಸಿದ್ದು ಪತಿ ಮಹಾದೇವನಾಯಕ ಸಾವನ್ನಪ್ಪಿದ್ದಾರೆ, ಮೂವರ ಸ್ಥಿತಿ ಚಿಂತಾಜನಕವಾಗಿದೆ.

ರಿಷಿಕಾ, ಗೌರಮ್ಮ, ಲೀಲಾವತಿಗೆ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಯ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ವರು ಸಾಮೂಹಿಕ ಆತ್ಮಹತ್ಯೆ ಯತ್ನಿಸಿರುವುದಕ್ಕೆ ಕಾರಣ ನಿಗೂಢವಾಗಿದೆ.

ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

Key words: Four -same family –attempted-suicide

Tags :

.