For the best experience, open
https://m.justkannada.in
on your mobile browser.

 ಪಂಚಭೂತಗಳಲ್ಲಿ ಲೀನರಾದ ಹಿರಿಯ ನಟ ದ್ವಾರಕೀಶ್.

01:38 PM Apr 17, 2024 IST | prashanth
 ಪಂಚಭೂತಗಳಲ್ಲಿ ಲೀನರಾದ ಹಿರಿಯ ನಟ ದ್ವಾರಕೀಶ್

ಬೆಂಗಳೂರು,ಏಪ್ರಿಲ್,17,2024 (www.justkannada.in): ನಿನ್ನೆ ನಿವಾಸದಲ್ಲೇ ಹೃದಯಾಘಾತದಿಂದ ನಿಧನರಾದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅವರ ಅಂತ್ಯಕ್ರಿಯೆ  ಇಂದು ಪೊಲೀಸ್ ಗೌರವದೊಂದಿಗೆ ನೆರವೇರಿತು.

ಚಾಮರಾಜಪೇಟೆ ರುದ್ರಭೂಮಿಯಲ್ಲಿ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅವರ ಅಂತ್ಯಕ್ರಿಯೆ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿತು.  ನಿನ್ನೆ ನಿಧನರಾದ ನಟ ದ್ವಾರಕೀಶ್ ಅವರ ಪಾರ್ಥೀವ ಶರೀರವನ್ನು ಬೆಂಗಳೂರಿನ ಟೌನ್ ಹಾಲ್ ಬಳಿ ಇರುವ ರವೀಂದ್ರ ಕಲಾಕ್ಷೇತ್ರಕ್ಕೆದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಕನ್ನಡ ಚಿತ್ರರಂಗದ ಗಣ್ಯರು ಇಲ್ಲಿ ಅಂತಿಮ ದರ್ಶನ ಪಡೆದರು.

ಅಂತಿಮ ದರ್ಶನದ ಬಳಿಕ ಬೆಂಗಳೂರಿನ ಚಾಮರಾಜಪೇಟೆ  ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ದ್ವಾರಕೀಶ್​​ ಅವರ ಐವರು ಮಕ್ಕಳು ಸೇರಿ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದಾರೆ.

Key words: Funeral, veteran, actor, Dwarkeesh

Tags :

.