ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಗಂಭೀರ ಗಾಯ.
05:26 PM Nov 02, 2023 IST
|
prashanth
ಮೈಸೂರು,ನವೆಂಬರ್,2,2023(www.justkannada.in): ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಶಿಕ್ಷಕರು ಸೇರಿದಂತೆ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ನಿಲಸೋಗೆ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಮುಖ್ಯ ಶಿಕ್ಷಕ ಮಹದೇವಯ್ಯ, ಶಿಕ್ಷಕಿ ಮೀನಾಕ್ಷಿ, ವಿದ್ಯಾರ್ಥಿಗಳಾದ ಧನುಷ್ ಪೃಥ್ವಿ, ಗೌತಮ್ ಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳಿಗೆ ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಬಿಇಒ ಶೋಭಾ ಅವರು ಭೇಟಿ ನೀಡಿದ್ದು, ಘಟನೆ ಬಗ್ಗೆ ನರಸೀಪುರ ಠಾಣಾ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.
Key words: Gas cylinder- explosion – school- teachers –students- seriously -injured.
Next Article