HomeBreaking NewsLatest NewsPoliticsSportsCrimeCinema

ದರ್ಶನ್ ಮತ್ತು ಮುಡಾ ವಿಚಾರ ಬಿಡಿ: ಮಹದಾಯಿ ಯೋಜನೆಗೆ ಅನುಮತಿ ಕೊಡಿಸ್ರಪ್ಪ- ಡಿ.ಕೆ ಶಿವಕುಮಾರ್ ಟಾಂಗ್

01:24 PM Sep 07, 2024 IST | prashanth

ಬೆಂಗಳೂರು,ಸೆಪ್ಟಂಬರ್,7,2024 (www.justkannada.in):  ಮುಡಾ ಮತ್ತು ವಾಲ್ಮೀಕಿ ಅಭಿವೃದ್ದಿ ನಿಗಮದ ವಿಚಾರವನ್ನ ಡೈವರ್ಟ್ ಮಾಡಲು ದರ್ಶನ್ ಫೊಟೊ ಬಿಡುಗಡೆ ಮಾಡಲಾಗಿದೆ ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ದರ್ಶನ್ ವಿಚಾರ ಹಾಗೂ ಮುಡಾ ಆರೋಪ ವಿಚಾರ ಬಿಡಿ. ಮೊದಲು ಮಹಾದಾಯಿ ಯೋಜನೆಗೆ ಅನುಮತಿ ಕೊಡಿಸ್ರಪ್ಪ ಎಂದಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಹಣ ನೀಡಿಲ್ಲ.  ಈ ಬಗ್ಗೆ ಕೇಂದ್ರಕ್ಕೆ ಮನವಿ ಮಾಡುವ ಬಗ್ಗೆ ಸಿಎಂ ಜತೆ ಚರ್ಚೆ ಮಾಡುತ್ತೇವೆ ನಂತರ ಸರ್ವಪಕ್ಷ ಸಭೆಯ ಕರೆಯುವ  ಬಗ್ಗೆ ಹೇಳುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಎತ್ತಿನಹೊಳೆ ಯೋಜನೆ ಬಗ್ಗೆ ರಾಜಕೀಯವಾಗಿ ಟೀಕೆ ಮಾಡಬಹುದು ನಾವು ನಮ್ಮ ಕೆಲಸ ಮಾಡಿದ್ದೇವೆ. ಎತ್ತಿನಹೊಳೆ ಯೋಜನೆಯನ್ನ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಕೋಲಾರ ಚಿಕ್ಕಬಳ್ಳಾಪುರಕ್ಕೆ  ನೀರು ತರುವುದು ಸವಾಲಿನ ಕೆಲಸ ಎಂದರು.

Key words:  Give, permission, Mahadayi project, DK Shivakumar

Tags :
DK ShivakumargiveMahadayi projectpermission
Next Article