HomeBreaking NewsLatest NewsPoliticsSportsCrimeCinema

ರಾಜ್ಯದ ರಾಮಭಕ್ತರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್.

11:29 AM Jan 10, 2024 IST | prashanth

ಬೆಂಗಳೂರು, ಜನವರಿ 10,2024(www.justkannada.in): ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮಮಂದಿರದ ಉದ್ಘಾಟನೆ  ಜನವರಿ 22 ರಂದು ನೆರವೇರಲಿದ್ದು, ಅಂದೇ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯ ಕೂಡ ನಡೆಯಲಿದೆ. ಈ ಸಂದರ್ಭಕ್ಕಾಗಿ ಕೋಟ್ಯಾಂತರ ರಾಮಭಕ್ತರು ಕಾದು ಕುಳಿತಿದ್ದಾರೆ. ಈ ನಡುವೆ ರಾಜ್ಯದಲ್ಲಿರುವ ರಾಮಭಕ್ತರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನ ನೀಡಿದೆ.

ಹೌದು, ರಾಜ್ಯದಿಂದ ಅಯೋಧ್ಯೆಗೆ ತೆರಳುವ ಕನ್ನಡಿಗರಿಗಾಗಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣವಾಗಲಿದೆ. ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಿಗಳು ಅಯೋಧ್ಯೆಗೆ ಆಗಮಿಸಲಿದ್ದು, ಇವರಿಗಾಗಿ ವಸತಿ, ಊಟದ ವ್ಯವಸ್ಥೆಗಾಗಿ ಅತಿಥಿ ಗೃಹ ನಿರ್ಮಾಣ ಮಾಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಕರ್ನಾಟಕ ಮುಜರಾಯಿ ಇಲಾಖೆ ಪತ್ರ ಬರೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ ರಾಮಭಕ್ತರಿಗೆ ಸರಯೂ ನದಿ ಸಮೀಪದಲ್ಲಿ ಅತಿಥಿ ಗೃಹ ನಿರ್ಮಿಸುವಂತೆ  2023ರ ಅಗಸ್ಟ್​​​ ತಿಂಗಳಲ್ಲಿ ಉತ್ತರ ಪ್ರದೇಶ ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದಕ್ಕೂ ಮುನ್ನ 2020ರಲ್ಲಿ ಬಿಎಸ್​ ಯಡಿಯೂರಪ್ಪ ಅವರು ಉತ್ತರ ಪ್ರದೇಶ  ಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದರು.

ಈ ಸಂಬಂಧ  ಕರ್ನಾಟಕ ಸರ್ಕಾರದ ಮನವಿಗೆ ಸ್ಪಂದಿಸಿ ಉತ್ತರ ಪ್ರದೇಶ ಸರ್ಕಾರದ ಹೌಸಿಂಗ್ ಬೋರ್ಡ್ ಪ್ರತಿಕ್ರಿಯೆ ಪತ್ರ ಕಳಿಸಿದ್ದು,  ಅಯೋಧ್ಯೆಯಲ್ಲಿ ಕರ್ನಾಟಕ ಅತಿಥಿ ಗೃಹ ನಿರ್ಮಾಣಕ್ಕೆ ಬೇಕಾದ ಪೂರ್ವ ತಯಾರಿ ನಡೆಯುತ್ತಿದೆ. ಈ ಮೂಲಕ ರಾಜ್ಯದ ಪ್ರವಾಸಿಗರಿಗೆ ವಾಸ್ತವ ಹೂಡಲು ತೊಂದರೆ ಆಗದಂತೆ ಕ್ರಮ ವಹಿಸಲಾಗುವುದು. ಇನ್ನೊಂದು ವರ್ಷದಲ್ಲಿ ರಾಮಮಂದಿರದ ಬಳಿ ಅತಿಥಿ ಗೃಹ  ನಿರ್ಮಾಣವಾಗಲಿದೆ ಎಂದು ತಿಳಿಸಿದೆ.

Key words: Good news - state government - Ram devotees

Tags :
Good news - state government - Ram devotees
Next Article